SHIVAMOGGA | MALENADUTODAY NEWS | ಮಲೆನಾಡು ಟುಡೆ
Sep 27, 2024 ಶಿವಮೊಗ್ಗರ ಪವರ್ ಪುಲ್ ವ್ಯಕ್ತಿಗಳು ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿಸುವತ್ತ ಹೆಜ್ಜೆ ಹಾಕಿದಂತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪನವರನ್ನ ಬಿಜೆಪಿಗೆ ವಾಪಸ್ ಕರೆತರುವ ವಿಚಾರದಲ್ಲಿ ಬೆಂಗಳೂರಿನಲ್ಲಿರುವ ಸೊರಬ ಕ್ಷೇತ್ರದ ಮಾಜಿ ಶಾಸಕ ಕುಮಾರ್ ಬಂಗಾರಪ್ಪರವರ ನಿವಾಸದಲ್ಲಿ ಮಹತ್ವದ ಸಭೆ ನಡೆದಿದೆ.
ಬಿಜೆಪಿಯಲ್ಲಿನ ಅತೃಪ್ತರು ಎಂದೇ ಹೇಳಲಾದ ನಾಯಕರು ಕುಮಾರ ಬಂಗಾರಪ್ಪರವರ ನಿವಾಸದಲ್ಲಿ ಅತೃಪ್ತರು ಸಭೆ ನಡೆಸಿದರು. ಪಕ್ಷದಿಂದ ದೂರ ಇರುವ ಮಾಜಿ ಸಚಿವ ಕೆ. ಎಸ್.ಈಶ್ವರಪ್ಪ ಅವರನ್ನು ಮತ್ತೆ ಪಕ್ಷಕ್ಕೆ ಕರೆ ತರುವ ಬಗ್ಗೆ ಈ ಸಭೆಯಲ್ಲಿ ಮಾತುಕತೆ ನಡೆಸಲಾಗಿದೆ ಎಂದು ಮೂಲಗಳು ಹೇಳುತ್ತಿವೆ.
ಈಶ್ವರಪ್ಪ ಪರವಾಗಿ ಹೈಕಮಾಂಡ್ ಬಳಿಯಲ್ಲಿ ವಕಾಲತ್ತು ವಹಿಸುವ ಕುರಿತು ಸಮಾಲೋಚನೆ ನಡೆಸಲಾಗಿದೆ ಎನ್ನಲಾಗಿದೆ. ಅಲ್ಲದೇ, ಬಳ್ಳಾರಿ ಪಾದಯಾತ್ರೆ ಕುರಿತು ಸಹ ಚರ್ಚೆ ನಡೆಸಲಾಗಿದೆ.
ರಮೇಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್, ಕುಮಾರ್ ಬಂಗಾರಪ್ಪ, ಚಂದ್ರಪ್ಪ, ಅರವಿಂದ ಲಿಂಬಾವಳಿ, ಬಿಪಿ ಹರೀಶ್, ಸಿದ್ದೇಶ್ವರ್ ಸೇರಿದಂತೆ ಹಲವರು ಭಾಗಿಯಾಗಿದ್ದರು ಎಂದು ರಾಜ್ಯಮಟ್ಟದ ಮಾಧ್ಯಮಗಳು ವರದಿ ಮಾಡಿವೆ.