SHIVAMOGGA | MALENADUTODAY NEWS | ಮಲೆನಾಡು ಟುಡೆ | Jan 16, 2025
ಶಿವಮೊಗ್ಗ | ಬಿಜೆಪಿಯವರು ಎಂದಿಗೂ ಗಾಂಧಿ ತತ್ವವನ್ನು ಒಪ್ಪಲಿಲ್ಲ ಎಂದು ಬಿಜೆಪಿ ವಿರುದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್ ಪ್ರಸನ್ನ ಕುಮಾರ್ ವಾಗ್ದಾಳಿ ನಡೆಸಿದರು.
ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾರವರು ಈ ಹಿಂದೆ ಅಂಬೇಡ್ಕರ್‌ರವರನ್ನಿ ಅವಮಾನಿಸಿದ್ದರು. ಅಷ್ಟೇ ಅಲ್ಲದೆ ಗಾಂಧೀಜಿಯನ್ನು ಕೊಂದ ನಾಥೂರಾಮ್ ಗೋಡ್ಸೆರವರಿಗೆ ಬಿಜೆಪಿಯವರು ದೇವಸ್ಥಾನ ಕಟ್ಟಿಸಿದ್ದಾರೆ. ಹೀಗೆ ಎಲ್ಲಾ ವಿಷಯದಲ್ಲಿಯೂ ವಿರೋದ ವ್ಯಕ್ತಪಡಿಸುತ್ತಿರುವ ಬಿಜೆಪಿಯವರು ಎಂದಿಗೂ ಗಾಂಧಿ ತತ್ವವನ್ನು ಒಪ್ಪಲ್ಲ ನಾವು ಸಂವಿಧಾನಕ್ಕೆ ಗೌರವ ಕೊಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದರು.
ಜ.21 ರಂದು ಕಾಂಗ್ರೆಸ್ ಅಧಿವೇಶನ
ಕಳೆದ ತಿಂಗಳು ಬೆಳಗಾವಿಯಲ್ಲಿ ಕಾಂಗ್ರೆಸಿನ ಅಧಿವೇಶನ ಹಮ್ಮಿಕೊಳ್ಳಲಾಗಿತ್ತು.ಆದರೆ ನಮ್ಮ ನಾಯಕರಾದ ಡಾ. ಮನಮೋಹನ್ ಸಿಂಗ್ ರವರ ನಿಧನದಿಂದ ಆ ಕಾರ್ಯಕ್ರಮವನ್ನು ಮುಂದೂಡಿದ್ದೆವು. ಜನವರಿ 21 ರಂದು ಜೈ ಬಾಪು ಜೈ ಭೀಮ್ ಜೈ ಸಂವಿಧಾನ ಎಂಬ ಹೆಸರಿನಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸಿನ ಅಧಿವೇಶನವನ್ನು ನಡೆಸಲಿದ್ದೇವೆ ಎಂದರು.ಹಾಗೆಯೇ ಬೆಳಗಾವಿಯಲ್ಲಿ ಗಾಂಧೀಜಿ ಅಧ್ಯಕ್ಷತೆ ವಹಿಸಿ ನಡೆಸಿದ ಕಾರ್ಯಕ್ರಮಕ್ಕೆ 100 ವರ್ಷ ತುಂಬಿದ ಹಿನ್ನಲೆ ನಾವು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಅಂದು ಬೆಂಗಳೂರಿನಲ್ಲಿರುವ ಗಾಂಧಿ ಪ್ರತಿಮೆಯ ರೀತಿಯೇ ಸುವರ್ಣಸೌಧದಲ್ಲಿ ಒಂದು ಗಾಂಧಿ ಪ್ರತಿಮೆಯನ್ನು ಅನಾವರಣ ಗೊಳಿಸುತ್ತಿದ್ದೇವೆ. ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯಿಂದ 3 ಸಾವಿರ ಹೊರಡಲಿದ್ದಾರೆ ಕಾಂಗ್ರೆಸಿಗರಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಹೆಮ್ಮೆಯ ಸಂಗತಿಯಾಗಿದೆ. ಸಿ ಎಂ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೇರಿದಂತೆ ಪ್ರಮುಖರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.
SUMMARY | Congress district president R Prasanna Kumar attacked the BJP, saying it never accepted Gandhian principles.
KEYWORDS | Congress, R Prasanna Kumar, BJP,

