ಬಿಜೆಪಿಯಿಂದ ಬಸವನಗೌಡ ಪಾಟೀಲ್‌ ಯತ್ನಾಳ್‌ ಉಚ್ಚಾಟನೆ | ಟ್ವೀಟರ್‌ನಲ್ಲಿ ಪೋಸ್ಟ್‌ ಮಾಡಿ ಬಿವೈ ವಿಜಯೇಂದ್ರ ಹೇಳಿದ್ದೇನು

131

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 27, 2025

ವಿಜಯಪುರದ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ರವರನ್ನು ಬಿಜೆಪಿ ಹೈಕಮಾಂಡ್‌ ಪಕ್ಷದ ಶಿಸ್ತು ಉಲ್ಲಂಘನೆಯ ಕಾರಣಕ್ಕೆ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟ್ವೀಟರ್‌ನಲ್ಲಿ ಸುಧೀರ್ಘ ಪೋಸ್ಟ್‌ ಒಂದನ್ನು ಶೇರ್‌ ಮಾಡಿದ್ದಾರೆ.



ಪೋಸ್ಟ್‌ನಲ್ಲಿರುವಂತೆ ಭಾರತೀಯ ಜನತಾ ಪಾರ್ಟಿ ಉದಾತ್ತ ಉದ್ದೇಶ ಹಾಗೂ ಗುರಿಯನ್ನಿಟ್ಟುಕೊಂಡು ಯೋಜಿತವಾಗಿ ಬೆಳೆದು ಕೋಟ್ಯಂತರ ಕಾರ್ಯಕರ್ತರನ್ನು ದೇಶ ಕಟ್ಟುವ ಬದ್ಧತೆಗಾಗಿ ಸಜ್ಜುಗೊಳಿಸಿದ ಪಕ್ಷ. ಅಶಿಸ್ತಿನ ವಿರುದ್ಧ ಇಂದು ಪಕ್ಷದ ವರಿಷ್ಠರು ಕೈಗೊಂಡಿರುವ ನಿರ್ಧಾರವನ್ನು ಯಾರೂ ಸಂಭ್ರಮಿಸಬಾರದೆಂದು ವಿನಂತಿಸುತ್ತೇನೆ ಸಂಸ್ಕಾರವಂತ ಹಾಗೂ ಶಿಸ್ತುಬದ್ಧ ಸಂಘಟನೆಯ ವ್ಯವಸ್ಥೆಯಲ್ಲಿರುವ ನಾವು ಪಕ್ಷದ ವರಿಷ್ಠರು ಕೈಗೊಂಡ ನಿರ್ಧಾರವನ್ನು ಗೌರವಿಸಿ, ಮುಂಬರುವ ದಿನಗಳಲ್ಲಿ ಪಕ್ಷ ಕಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೈಗೊಳ್ಳಬೇಕಿರುವ ಹೋರಾಟಗಳತ್ತ ಒಗ್ಗಟ್ಟಿನ ಸಂಕಲ್ಪ ತೊಟ್ಟು ಮುನ್ನಡೆಯೋಣ ಎಂದು ಬರೆದುಕೊಂಡಿದ್ದಾರೆ.

SUMMARY | Vijayapura MLA Basavanagouda Patil Yatnal has been expelled from the party for six years by the BJP high command for violating party discipline

KEYWORDS | Vijayapura MLA,  Basavanagouda Patil Yatnal, expelled, BJP,

Share This Article