ಬಿಪಿಎಲ್‌ ಕಾರ್ಡ್‌ಗಳ ಪರಿಷ್ಕರಣೆಗೆ ಮುಂದಾದ ರಾಜ್ಯ ಸರ್ಕಾರ!?

13

SHIVAMOGGA| MALENADUTODAY NEWS | ಮಲೆನಾಡು ಟುಡೆ  Mar 11, 2025 ‌‌ ‌

ಸದ್ಯ ನಡೆಯುತ್ತಿರುವ ವಿಧಾನಸಭಾ ಅಧಿವೇಶನದ ಬಳಿಕ ಬಿಪಿಎಲ್‌ ಕಾರ್ಡ್‌ಗಳ ಪರಿಷ್ಕರಣೆ ನಡೆಯಲಿದೆ ಎಂದು ಆಹಾರ ಸಚಿವ ಕೆಎಚ್‌ ಮುನಿಯಪ್ಪ ಹೇಳಿದ್ದಾರೆ. ಇದೀಗ ಕೇಂದ್ರ ಸರ್ಕಾರದ ಮಾನದಂಡ ಪರಿಗಣಿಸಿ ಪರಿಷ್ಕರಣೆ ನಡೆಯಲಿದೆ. 

ವಿಧಾನ ಪರಿಷತ್‌ನಲ್ಲಿ ಬಿಜೆಪಿಯ ಸಿ.ಟಿ. ರವಿ ಪ್ರಶ್ನೆಗೆ ಉತ್ತರಿಸಿದ ಸಚಿವರು ರಾಜ್ಯದಲ್ಲಿ 1.10 ಕೋಟಿ ಬಿಪಿಎಲ್ ಕಾರ್ಡ್‌ಗಳ ಪೈಕಿ 20 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳಿವೆ ಎಂದು ಅಂದಾಜಿಸಲಾಗಿದೆ. ಹಾಗೂ ಹೊಸ ಬಿಪಿಎಲ್ ಕಾರ್ಡ್ ನೀಡಲು ಭೌತಿಕ ಪರಿಶೀಲನೆ ಕಡ್ಡಾಯಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಪಿಡಿಒ, ಗ್ರಾಮ ಲೆಕ್ಕಾಧಿಕಾರಿ, ಪಂಚಾಯಿತಿ ಕಾರ್ಯದರ್ಶಿ, ಕಂದಾಯ ನಿರೀಕ್ಷಕರನ್ನು ಒಳಗೊಂಡ ಸಮಿತಿ ರಚನೆ ಮಾಡಲಾಗಿದೆ. 

ಇನ್ನೂ ಹೊಸ ಬಿಪಿಎಲ್ ಪಡಿತರ ಚೀಟಿಗಾಗಿ 2023ರಿಂದ ಈವರೆಗೂ 2,95,986 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ 2,04,760 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಉಳಿದ 91 ಸಾವಿರ ಅರ್ಜಿಗಳು ಪರಿಷ್ಕರಣೆ ಹಂತದಲ್ಲಿದ್ದು, ಆ ಪೈಕಿ  50 ರಿಂದ 60 ಸಾವಿರ ಅನರ್ಹ ಬಿಪಿಎಲ್ ಅರ್ಜಿಗಳಿವೆ ಎಂದು ತಿಳಿಸಿದ್ದಾರೆ.

Share This Article