SHIVAMOGGA | MALENADUTODAY NEWS | ಮಲೆನಾಡು ಟುಡೆ
ಶಿವಮೊಗ್ಗ | ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2024 ಸೆಪ್ಟಂಬರ್ ವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿಕೊಂಡಿರುವ ನಿವೇಶನ/ಕಟ್ಟಡಗಳಿಗೆ ಎ ಮತ್ತು ಬಿ-ಖಾತೆ ನೀಡಲು ಅವಕಾಶ ಕಲ್ಪಿಸಲಾಗಿದೆ. ಈ ಹಿನ್ನಲೆ ಆಸ್ತಿ ಮಾಲಿಕರು ಪಾಲಿಕೆ ಕಚೇರಿಯನ್ನು ಸಂಪರ್ಕಿಸುವಂತೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿಯೂ ಇ – ಖಾತಾ ಹಾಗೂ ಬಿ ಖಾತಾ ಹಂಚುವುದರ ಬಗ್ಗೆ ಸಾಗಷ್ಟು ಗೊಂದಲಗಳಿದ್ದವು. ಹಾಗೆಯೇ ಇದರ ಸಲುವಾಗಿ ಸಾರ್ವಜಕರಿಂದ ಅನೇಕ ಅರೋಪಗಳು ಕೇಳಿ ಬರುತ್ತಿದ್ದವು.
ಈ ನಡುವೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಎ – ಖಾತಾ ಹಾಗೂ ಬಿ – ಖಾತಾ ಪಡೆಯುವ ಕುರಿತಂತೆ, ಜಿಲ್ಲಾಧಿಕಾರಿ ಡಾ. ಗುರುದತ್ ಹೆಗಡೆ ಅವರು ಫೆಬ್ರವರಿ 18 ರಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದರು.
ಅದರ ಬೆನ್ನಲ್ಲೇ ಇದೀಗ ಮಹಾನಗರ ಪಾಲಿಕೆ 2024 ಸೆಪ್ಟಂಬರ್ ವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿಕೊಂಡಿರುವ ನಿವೇಶನ/ಕಟ್ಟಡಗಳಿಗೆ ಎ ಮತ್ತು ಬಿ-ಖಾತೆ ನೀಡಲು ಮುಂದಾಗಿದೆ. ಹಾಗೆಯೇ ಅದಕ್ಕೆ ಬೇಕಾದ ಸೂಕ್ತ ದಾಖಲೆಗಳನ್ನು ನೀಡುವಂತೆ ಜಾಗದ ಮಾಲೀಕರಿಗೆ ಸೂಚನೆ ನೀಡಿದೆ.
ದಾಖಲೆಗಳು ಏನೇನು ಬೇಕು
ಎ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಮಾಡಿಸುವ ನೊಂದಾಯಿತ ಮಾರಾಟ ಪತ್ರಗಳು/ದಾನ ಪತ್ರ/ವಿಭಾಗ ಪತ್ರಗಳು
ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕುಪತ್ರಗಳು/ ಮಂಜೂರಾತಿ ಪತ್ರಗಳು, ಕಂದಾಯ ಇಲಾಖೆಯಿಂದ 94 ಸಿ.ಸಿ. ಅಡಿ ನೀಡಲಾದ ಹಕ್ಕುಪತ್ರ.
ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನ ಬಿಡುಗಡೆ ಪತ್ರ. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ.
ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿ ಮತ್ತು ಕಟ್ಟಡವಿದ್ದಲ್ಲಿ ವಿದ್ಯುಚ್ಛಕ್ತಿ ಬಿಲ್ ಪ್ರತಿಗಳನ್ನು ಸಲ್ಲಿಸುವಂತೆ ಪಾಲಿಕೆ ತಿಳಿಸಿದೆ.
ಬಿ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಪಡಿಸುವ ಸೆಪ್ಟೆಂಬರ್ 2024 ರ ಪೂರ್ವದಲ್ಲಿ ನೊಂದಾಯಿತ ಮಾರಾಟ ಪತ್ರಗಳು/ ದಾನ ಪತ್ರ/ವಿಭಾಗ ಪತ್ರಗಳು/ಹಕ್ಕು ಖುಲಾಸೆ ಪತ್ರಗಳು,
ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ, ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ, ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ, ಮಾಲೀಕರ ಗುರುತಿನ ದಾಖಲೆ ಪ್ರತಿಗಳನ್ನು ಸಲ್ಲಿಸುವುದು.
ಖಾತಾ ಪಡೆಯಲು ಲಾಸ್ಟ್ ಡೇಟ್ ಯಾವಾಗ
ಮಹನಗರ ಪಾಲಿಕೆ ಈ ಮಾಹಿತಿ ಹೊರಡಿಸಿದ ದಿನಾಂಕದಿಂದ ಅಂದರೆ ಇಂದಿನಿಂದ ಮೂರು ತಿಂಗಳೊಳಗೆ ದಾಖಲೆಗಳನ್ನು ಸಲ್ಲಿಸಿ ಬಿ-ಖಾತೆಯನ್ನು ಪಡೆಯಬಹುದಾಗಿದೆ.
SUMMARY | A and B-accounts have been provided to sites/buildings constructed in unauthorised layouts within the mcc limits till September 2024.
KEYWORDS | buildings, A and B accounts, unauthorised,