ಬುಲೆಟ್‌, ಆಟೋ, ಕಾರು ಡಿಕ್ಕಿ | ಇಬ್ಬರ ಸಾವು | ಸಾಗರದಲ್ಲಿ ನಿನ್ನೆ ರಾತ್ರಿ ನಡೆದಿದ್ದೇನು?

13

 SHIVAMOGGA| MALENADUTODAY NEWS | ಮಲೆನಾಡು ಟುಡೆ  Mar 17, 2025 ‌‌ ‌‌

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರದ ಸಮೀಪ ಸಿಗುವ ಹೊಸಗುಂದ ಬಳಿ ನಿನ್ನೆದಿನ ರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. 

Malenadu Today

ಘಟನೆ ವಿವರ 

ಹೊಸಗುಂದದ ಬಳಿ ಟರ್ನಿಂಗ್‌ನಲ್ಲಿ ಘಟನೆ ನಡೆದಿದೆ. ಬೆಂಗಳೂರಿನಿಂದ ಶಿರಸಿಗೆ ಹೋಗುತ್ತಿದ್ದ ಬೈಕ್‌ ಹಾಗೂ ಒಂದು ಆಟೋ ಮತ್ತು ಕಾರಿನ ನಡುವೆ ಆಕ್ಸಿಡೆಂಟ್‌ ಸಂಭವಿಸಿದ್ದು, ಘಟನೆ ಹೇಗಾಯ್ತು ಎಂಬುದು ಸ್ಪಷ್ಟವಾಗಿಲ್ಲ. ಘಟನೆಯ ಭೀಕರತೆಯಲ್ಲಿ ಬೈಕ್‌ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಆಟೋ ಚಾಲಕ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯದಲ್ಲಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಇನ್ನೂ ಕಾರಿನಲ್ಲಿದ್ದವರಿಗೂ ಗಾಯಗಳಾಗಿದ್ದು, ಅವರನ್ನು ಸಾಗರ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಆನಂದಪುರ ಪೊಲೀಸ್‌ ಠಾಣೆ ಪೊಲೀಸರು ವಿಚಾರಣೆ ನಡೆಸ್ತಿದ್ದಾರೆ.

Malenadu Today

 

 

 .

 

Share This Article