SHIVAMOGGA | MALENADUTODAY NEWS | ಮಲೆನಾಡು ಟುಡೆ Oct 29, 2024
ಶಿವಮೊಗ್ಗ | ಇಲ್ಲಿನ ತೀರ್ಥಹಳ್ಳಿ ತಾಲ್ಲೂಕು ಆಗುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೌರಿಹಕ್ಕಲು ಬಳಿ ಕಳೆದ ಭಾನುವಾರ ಸಂಭವಿಸಿದ ಅಪಘಾತದಲ್ಲಿ ಓರ್ವರು ಸಾವನ್ನಪ್ಪಿದ್ದಾರೆ.
ಬೈಕ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ. ಇಲ್ಲಿನ ನಂಟೂರು ಗ್ರಾಮದ ನಿವಾಸಿ ರಘುರಾಮ್ (35) ಮೃತಪಟ್ಟವರು.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಘುರಾಮ್ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇನ್ನೂ ಬೈಕ್ ಹಿಂಭಾಗದಲ್ಲಿ ಕುಳಿತಿದ್ದ ರಘುರಾಮ್ ಅವರ ಪುತ್ರ ಸಹಗಂಭೀರವಾಗಿ ಗಾಯಗೊಂಡಿದ್ದು,ಅವರಿಗೆ ಚಿಕಿತ್ಸೆ ಮುಂದುವರಿದಿದೆ.
SUMMARY | Shimoga | One person was killed in an accident near Kourihakkalu under Agumbe gram panchayat limits in Theerthahalli taluk here on Sunday.
KEYWORDS | Shimoga ,One person was killed , accident near Kourihakkalu, Agumbe gram panchayat limits , Thirthahalli taluk,