SHIVAMOGGA | MALENADUTODAY NEWS | ಮಲೆನಾಡು ಟುಡೆ Jan 6, 2025
ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರ್ ವೊಂದು ಪಲ್ಟಿಯಾದ ಘಟನೆ ನಿನ್ನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಶಿವಮೊಗ್ಗ ನಗರದಿಂದ ತೀರ್ಥಹಳ್ಳಿಗೆ ಹೋಗುವ ರಸ್ತೆಯಲ್ಲಿ ಸಿಗುವ ಅರಕೆರೆ ಬಳಿಯಲ್ಲಿ ಈ ಘಟನೆ ಸಂಭವಿಸಿದೆ.
ಎದುರುಗಡೆ ಬಂದ ಬೈಕ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸುವ ವೇಳೆ ಕಂಟ್ರೋಲ್ ತಪ್ಪಿ ಇನ್ನೋವಾ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಕಾರು ಚಾಲಕನಿಗೆ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಶಿವಮೊಗ್ಗ ನಗರದ ಉಮರ್ ಮತ್ತವರ ಸ್ನೇಹಿತರು ತೀರ್ಥಹಳ್ಳಿಗೆ ಕಡೆಗೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆ ಸಂಬಂಧ ಪಶ್ಚಿಮ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
SUMMARY |Innova car overturns near Arakere in Shimoga city


KEY WORDS | Innova car overturns Arakere in Shimoga city