SHIVAMOGGA | MALENADUTODAY NEWS | ಮಲೆನಾಡು ಟುಡೆ | Apr 2, 2025
ಭದ್ರಾವತಿಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಕಿಡಿಗೇಡಿಗಳು ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ್ದಾರೆ. ಪ್ರಮೋದ್ ಹಲ್ಲೆಗೆ ಒಳಗಾದ ವ್ಯಕ್ತಿ. ಇದರಿಂದಾಗಿ ಜೆಡಿಎಸ್ ಕಾರ್ಯಕರ್ತರು ಘಟನೆಯನ್ನು ಖಂಡಿಸಿ ರಸ್ತೆಯನ್ನು ತಡೆದು ಆಕ್ರೋಶವನ್ನು ವ್ಯಕ್ತಪಡಿಸಿದರು.
ನಡೆದಿದ್ದೇನು
ಪ್ರಮೋದ್ ರಾತ್ರಿ ಬಸ್ ನಿಲ್ದಾಣದಿಂದ ತಮ್ಮ ಮನೆಗೆ ಬೈಕ್ ನಲ್ಲಿ ತರೀಕೆರೆ ರಸ್ತೆಯಲ್ಲಿ ತೆರಳುತ್ತಿದ್ದರು. ಆ ವೇಳೆ ಮೂರು ಬೈಕ್ ನಲ್ಲಿ ಬಂದ 6 ಜನ ಯುವಕರು ಪ್ರಮೋದ್ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಇದರ ಪರಿಣಾಮ ಪ್ರಮೋದ್ ತಲೆಗೆ ಗಂಭೀರ ಗಾಯಗಳಾಗಿವೆ. ಅಷ್ಟೇ ಅಲ್ಲದೆ ಹಲ್ಲೆ ನಡೆಸಿ ಪ್ರಮೋದ್ ಕೊರಳಲ್ಲಿದ್ದ ಬಂಗಾರದ ಸರವನ್ನು ಸಹ ಕೊಂಡೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ. ನಂತರ ಪ್ರಮೋದ್ ಹಳೆ ನಗರ ಪೋಲಿಸ್ ಠಾಣೆಗೆ ದೂರನ್ನು ನೀಡಿದರು.
ಇದನ್ನು ಖಂಡಿಸಿ ನಿನ್ನೆ ರಾತ್ರಿ ಜೆಡಿಎಸ್ ಕಾರ್ಯಕರ್ತರು ರಸ್ತೆಯನ್ನು ತಡೆದು ಆಕ್ರೋಶವನ್ನು ವ್ಯಕ್ತಪಡಿಸಿದರು. ಅಷ್ಟೇ ಅಲ್ಲದೆ ಈ ಹಲ್ಲೆಯನ್ನು ಮಾಡಿದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ನಾಯಕಿ ಶಾರದಾ ಅಪ್ಪಾಜಿ ಗೌಡ ಸೇರಿದಂತೆ ಪ್ರಮುಖರು ಇದ್ದರು.
SUMMARY | In Bhadravathi, miscreants intercepted a man riding a bike and attacked him with a beer bottle.
KEYWORDS | Bhadravathi, attacked, beer bottle,