SHIVAMOGGA | MALENADUTODAY NEWS | ಮಲೆನಾಡು ಟುಡೆ Jan 24, 2025
ರಾಜ್ಯದ ಮಹತ್ವದ ಯೋಜನೆ ಭದ್ರಾ ಮೇಲ್ದಂಡೆ ಕಾಮಗಾರಿ ಬಗ್ಗೆ ಸಿಎಂ ಸಿದ್ದರಾಮಯ್ಯ ನಿನ್ನೆದಿನ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ ಎಂದಿದ್ದಾರೆ.
ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ ಆದರೆ ಶೀಘ್ರ ಗತಿಯಲ್ಲಿ ಕಾಮಗಾರಿಗಳು ನಡೆಯುತ್ತಿಲ್ಲ ಎಂದ ಅವರು, ಗುತ್ತಿಗೆದಾರಿಗೆ ಈ ವರ್ಷ 800 ಕೋಟಿಗಳನ್ನು ಪಾವತಿಸಲಾಗಿದೆ ಎಂದು ಮಾಹಿತಿ ನೀಡಿದರು. ಚಿತ್ರದುರ್ಗದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂಪಾಯಿಗಳನ್ನು ನೀಡುವುದಾಗಿ 2023-24 ರ ಕೇಂದ್ರ ಸರ್ಕಾರ ಬಜೆಟ್ನಲ್ಲಿ ಹೇಳಲಾಗಿತ್ತು.
ಆದರೆ ಇದುವರೆಗೂ ಒಂದು ಪೈಸೆಯೂ ಬಂದಿಲ್ಲ, ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪದಪದೇ ಮನವಿ ಮಾಡಿದರೂ ಕೇಂದ್ರ ಸರ್ಕಾರಿ ಹಣ ಬಿಡುಗಡೆಗೆ ಒಲವು ತೋರುತ್ತಿರಲ್ಲ ಎಂದು ಅಸಮಾಧಾನ ಹೊರಹಾಕಿದರು.
SUMMARY | CM Siddaramaiah says upper Bhadra project river works not stopped
KEY WORDS | CM Siddaramaiah, upper Bhadra project
