ಮಂಗನ ಕಾಯಿಲೆಗೆ ತೀರ್ಥಹಳ್ಳಿಯ ಮಹಿಳೆ ಬಲಿ

ಹಂಚಿಕೊಳ್ಳಿ
WhatsApp Facebook X Telegram
ಮಂಗನ ಕಾಯಿಲೆಗೆ ತೀರ್ಥಹಳ್ಳಿಯ ಮಹಿಳೆ ಬಲಿ

SHIVAMOGGA | MALENADUTODAY NEWS | ಮಲೆನಾಡು ಟುಡೆ

ಶಿವಮೊಗ್ಗ | ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲೂಕಿನ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಜನವರಿ 23 ರಂದು ತೀರ್ಥಹಳ್ಳಿ ತಾಲೂಕಿನ ಕೊನೇರಿಪುರದ 55 ವರ್ಷದ ಮಹಿಳೆಗೆ ಕೆಎಫ್‌ಡಿ ಪಾಸಿಟಿವ್‌ ಬಂದಿತ್ತು. ಆದ್ದರಿಂದ ಮಹಿಳೆಯನ್ನು ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗನ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಸೋಂಕು ಹೆಚ್ಚಾದ ಹಿನ್ನಲೆ  ಮಹಿಳೆಯನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. ಆಗ ಗುಣಮುಖರಾಗಿದ್ದ ಅವರು ಜನವರಿ 29ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಮತ್ತೆ ರೋಗದ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆ ಫೆಬ್ರವರಿ 5 ರಂದು ಪುನಃ ಮಣಿಪಾಲಕ್ಕೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಫೆಬ್ರವರಿ 14ರಂದು ಮಹಿಳೆ ಮೃತಪಟ್ಟಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮಹಿಳೆಯು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು ಚಿಕಿತ್ಸೆಗೆ ಸ್ಪಂದಿಸಲಿಲ್ಲ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಇದು ಈ ವರ್ಷದ ಮೊದಲ ಬಲಿಯಾಗಿದೆ

SUMMARY | A woman from Thirthahalli taluk, who was suffering from monkey disease, succumbed to her injuries.

KEYWORDS | Thirthahalli taluk, KFD, woman died,

ಹಂಚಿಕೊಳ್ಳಿ
WhatsApp Facebook X Telegram
131
ಲೇಖಕರ ಬಗ್ಗೆ

131

Malenadu Today Contributor