SHIVAMOGGA | MALENADUTODAY NEWS | Apr 24, 2024
ಮದುವೆ ವಿಚಾರಕ್ಕೆ ಸಂಬಂಧಿಕರ ನಡುವೆ ಗಲಾಟೆಯಾಗಿ ವಿಚಾರ ಪೊಲೀಸ್ ಸ್ಟೇಷನ್ ಮೆಟ್ಟಿಲು ಹತ್ತಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಪೇಪರ್ ಟೌನ್ ಪೊಲೀಸ್ ಸ್ಟೇಷನ್ ಲಿಮಿಟ್ಸ್‌ನಲ್ಲಿ ನಡೆದಿದೆ. ಮನೆಯಲ್ಲಿ ನಡೆಯಬೇಕಿದ್ದ ಶುಭಕಾರ್ಯ ಮದುವೆಯ ವಿಚಾರವಾಗಿ ಇಲ್ಲಿನ ನಿವಾಸಿಯೊಬ್ಬರ ಸಂಬಂಧಿಕರ ನಡುವೆ ಜಗಳವಾಗಿದೆ. ಮಾತಿಗೆ ಮಾತು ಬೆಳೆದು ಗಲಾಟೆ ತಾರಕ್ಕೇರಿದೆ. ಹೀಗಾಗಿ ಸ್ಥಳಕ್ಕೆ ಬಂದ ಪೊಲೀಸರು ಗಲಾಟೆ ಮಾಡಿಕೊಳ್ಳದಂತೆ ಸೂಚಿಸಿದ್ದಾರೆ. ಅಲ್ಲದೆ ಅವಶ್ಯಕತೆ ಬಂದರೆ ಸ್ಟೇಷನ್‌ಗೆ ಬಂದು ದೂರುಕೊಡುವಂತೆ ತಿಳಿಸಿದ್ದಾರೆ.
ಹುಡುಗ & ಹುಡುಗಿ ಮನೆಯವರ ಗಲಾಟೆ
ಇತ್ತ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಪ್ರೀತಿ,ಪ್ರೇಮದ ವಿಚಾರವಾಗಿ ಎರಡು ಮನೆಯವರು ಪರಸ್ಪರ ಗಲಾಟೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಪರಸ್ಪರ ಪ್ರೇಮಿಸ್ತಿದ್ದ ಹುಡುಗ & ಹುಡುಗಿ ಮನೆಯವರು ಇದೇ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ. ಮಾತಿಗೆ ಮಾತು ಬೆಳೆದು ಗಲಾಟೆ ಜೋರಾದ ಬೆನ್ನಲ್ಲೆ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಇನ್ನೂ ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಹಾದಿ ಬೀದಿಯಲ್ಲಿ ಗಲಾಟೆ ಮಾಡದಂತೆ ಸೂಚಿಸಿ ಸ್ಟೇಷನ್‌ಗೆ ಬಂದು ಸಮಸ್ಯೆ ಬಗೆಹರಿಸಿಕೊಳ್ಳುವಂತೆ ತಿಳಿಸಿದ್ದಾರೆ.