SHIVAMOGGA | MALENADUTODAY NEWS | ಮಲೆನಾಡು ಟುಡೆ Dec 18, 2024
ಮನೆ ಮಾಲೀಕರು ಮನೆಯಲ್ಲಿ ಇಲ್ಲದೆ ಇರುವ ಮನೆಯ ಸಾಮಗ್ರಿಗಳನ್ನ ತೆಗೆದುಕೊಂಡು ಹೋದ ಬಗ್ಗೆ ಶಿವಮೊಗ್ಗ ಪೊಲೀಸರಿಗೆ ವಿನೋಬನಗರಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ದೂರೊಂದು ಕೇಳಿಬಂದಿದೆ. ದಿನಾಂಕ 17.12.2024ರಂದು ನಡೆದ ಘಟನೆಯಲ್ಲಿ ವಿಷಯ ತಿಳಿದು 112 ERV ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಆ ಬಳಿಕ ಮನೆಯಲ್ಲಿನ ಸಾಮಗ್ರಿಗಳನ್ನು ತೆಗೆದುಕೊಂಡು ಹೋಗಿರುವುದನ್ನ ಪರಿಶೀಲಿಸಿದ ಪೊಲೀಸರು ಸಂಬಂಧಪಟ್ಟವರ ವಿರುದ್ಧ ದೂರು ದಾಖಲಿಸುವಂತೆ ಸೂಚಿಸಿದ್ದಾರೆ.
ರೈತನಿಗೆ ದಮ್ಕಿ ಹಾಕಿದರೇ?
ಶಿವಮೊಗ್ಗದ ಗಾರ್ಡನ್ ಏರಿಯಾದಲ್ಲಿರುವ ಅಂಗಡಿಯೊಂದ ಮಾಲೀಕರು ರೈತರೊಬ್ಬರಿಗೆ ಜೀವ ಬೆದರಿಕೆ ಹಾಕಿದ ಆರೋಪ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಇಲ್ಲಿನ ಅಂಗಡಿ ಮಾಲೀಕರು ತಮ್ಮ ಬಳಿ ಖರೀದಿಸಿದ ವಸ್ತುವೊಂದಕ್ಕೆ ಸಂಬಂಧಿಸಿದಂತೆ ಕಂಪ್ಲೆಂಟ್ ಹೇಳಿದ ವ್ಯಕ್ತಿಯ ಜೊತೆಗೆ ಜಗಳವಾಡಿದ್ದಾರೆ ಎಂದು ದೂರಲಾಗಿದೆ. ಅಲ್ಲದೆ 20 ಲಕ್ಷ ರೂಪಾಯಿ ಖರ್ಚು ಮಾಡಿ ತಲೆ ಉರುಳಿಸುವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸದ್ಯ ಪ್ರಕರಣದ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಾವು ಮೂಡಿಸಿದ ಅನುಮಾನ
ಇನ್ನೊಂದಡೆ ಶಿವಮೊಗ್ಗದ ಗಾಡಿಕೊಪ್ಪದ ಸೇವಾಲಾಲ್ ಬೀದಿಯ ನಿವಾಸಿಯೊಬ್ಬರು ಸಾವನ್ನಪ್ಪಿದ್ದು, ಅವರ ಸಾವು ಆತ್ಮಹತ್ಯೆಯಿಂದ ಆಗಿಲ್ಲ, ಇದೊಂದು ಅನುಮಾನಸ್ಪದ ಸಾವು ಎಂದು ಕುಟುಂಬಸ್ಥರು ದೂರಿದ್ದಾರೆ. ಗಾಡಿಕೊಪ್ಪದ ನಿವಾಸಿ ಭೋಜ್ಯನಾಯ್ಕ (58) ಸಾವನ್ನಪ್ಪಿದ್ದು, ಅವರ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಆಸ್ತಿ ವಿಚಾರದ ಕಾರಣಕ್ಕಾಗಿ ಅವರ ಸಾವು ಸಂಭವಿಸಿರಬಹುದು ಎಂದು ದೂರಿರುವ ಕುಟುಂಬಸ್ಥರ ಆರೋಪದ ಅಡಿಯಲ್ಲಿ ಅನುಮಾನಸ್ಪದ ಸಾವು ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.
SUMMARY | shivamogga top news
KEY WORDS | shivamogga top news