SHIVAMOGGA | MALENADUTODAY NEWS | Aug 21, 2024 ಮಲೆನಾಡು ಟುಡೆ
ಅರಣ್ಯ ಒತ್ತುವರಿ ವಿಚಾರದಲ್ಲಿ ಇದೀಗ ಮಲೆನಾಡಿನಲ್ಲಿ ಆತಂಕ ಹೆಚ್ಚಾಗಿದ್ದು, ಈಗಾಗಲೇ ಹಲವರಿಗೆ ನೋಟಿಸ್ ಜಾರಿಯಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಶಿವಮೊಗ್ಗ ಜಿಲ್ಲೆಯ ಉಬ್ಳೇಬೈಲ್ ಭಾಗದ ರೈತರಿಗೆ ಅರಣ್ಯ ಅಧಿಕಾರಿಗಳು ನೋಟಿಸು ಜಾರಿ ಮಾಡಿದ್ದಾರೆ ..
ಉಂಬ್ಳೆಬೈಲ್ ಗ್ರಾಮದ ರೈತರು ಭದ್ರ ಮುಳಗಡೆ ಸಂತ್ರಸ್ತರಾಗಿದ್ದು, ಅವರಿಗೂ ಕೂಡ ನೋಟಿಸು ನೀಡಿ ಒತ್ತವರಿ ತೆರವು ಮಾಡಿ ಎಂದು ಅರಣ್ಯ ಇಲಾಖೆ ಅಧಿಕಾರಿ ನೋಟೀಸ್ ನೀಡಿದ್ದಾರೆ ಎನ್ನಲಾಗಿದೆ.
ಇನ್ನೂ ಈ ವಿಚಾರದಲ್ಲಿ ಇವತ್ತು ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ ಆರ್ ಎಂ ಮಂಜುನಾಥಗೌಡ ನೇತೃತ್ವದಲ್ಲಿ ನೂರಾರು ರೈತರು ಶಿವಮೊಗ್ಗ ಡಿಸಿ ಗುರುದತ್ತ್ ಹೆಗಡೆಯವರನ್ನ ಭೇಟಿ ಮನವಿ ಸಲ್ಲಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಆರ್ಎಂ ಮಂಜುನಾಥ ಗೌಡ RM Manjunath Gowda ಉಂಬ್ಳೆ ಬೈಲ್ ಭಾಗದ ರೈತರಿಗೆ ತೊಂದರೆ ನೀಡಬೇಡಿ ಎಂದು ಮನವಿ ಮಾಡಿದರು, ಅಲ್ಲದೆ ಇವರೆಲ್ಲಾ ಭದ್ರಾ ಮುಳುಗಡೆ ಸಂತ್ರಸ್ತರು, ಅದರ ಅರಿವು ಇದ್ದರೂ ನೋಟಿಸ್ ನೀಡಲಾಗುತ್ತಿದೆ ಎಂದು ಆರೋಪಿಸಿದರು.
ಈ ವೇಳೇ ಮಾಜಿ ಲೋಕಸಭಾ ಸದಸ್ಯರು ಆಯನೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರು ಎಸ್ ಕೆ ಮರಿಯಪ್ಪ ಉಂಬ್ಳೇಬೈಲ್ ಮುಖಂಡರು ದುಗ್ಗಪ್ಪ ಗೌಡ ರಮೇಶ್ ಹೆಗ್ಡೆ ಗ್ರಾಮ ಪಂಚಾಯತಿ ಅಧ್ಯಕ್ಷರು ಶಿವಕುಮಾರ್ ಕಾಂಗ್ರೆಸ್ ಘಟಕದ ಅಧ್ಯಕ್ಷರು ಪ್ರಮೋದ್ ಮಧುಸೂದನ್ ಗಂಗಮ್ಮ ಸಚಿನ್ ಶೆಟ್ಟಿ ಈಶಣ್ಣ ರಾಘು ಶಾಮಿಯಾನ ಮತ್ತು ಪ್ರಮುಖ ಜೊತೆಗಿದ್ದರು…
ಇನ್ನಷ್ಟು ಸುದ್ದಿಗಳು
-
ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ | ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ
-
ಜೋಗ್ಪಾಲ್ಸ್ ಗೆ ಹೋಗುವಾಗ ಇರಲಿ ಎಚ್ಚರ | ಪ್ರಯಾಣಿಕನ ಮೇಲೆಯೇ ಹರಿಯಿತು ಬಸ್ | ನಡೆದಿದ್ದೇನು?
-
Shikaripura | ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಯತ್ನ |
-
ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ | ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಏಳು ಪ್ರಮುಖ ಸೂಚನೆ
-
ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸ | ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದ್ದೇನು?
-
ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ