ಮಲೆನಾಡ ಕರಕುಶಲ ಉತ್ಸವ ಮತ್ತು ಫಲಪುಷ್ಪ ಪ್ರದರ್ಶನಕ್ಕೆ ದಿನಾಂಕ ನಿಗದಿ | ಯಾವಾಗ ನಡೆಯಲಿದೆ?

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 21, 2025

ಶಿವಮೊಗ್ಗ | ಅಲ್ಲಮಪ್ರಭು ಮೈದಾನದಲ್ಲಿ ಜನವರಿ 24 ರಿಂದ 26 ರ ವರೆಗೆ ಮೂರು ದಿನಗಳ ಕಾಲ ಮಲೆನಾಡ ಕರಕುಶಲ ಉತ್ಸವ ಮತ್ತು ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್‌ ಸಿಇಒ ಹೇಮಂತ್‌ ಎನ್ ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು  ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಬಾರಿಗೆ ಈ ಕಾರ್ಯಕ್ರಮ ನಡೆಯುತ್ತಿದ್ದು,‌ ಈ ಕಾರ್ಯಕ್ರಮವನ್ನು 75 ನೇ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಉದ್ಯಾನ ಕಲಾ ಸಂಘಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದೇವೆ ಎಂದರು. ಹಾಗೆಯೇ  ಜ.24 ರಿಂದ 26 ರ ಬೆಳಿಗ್ಗೆ 9 ಗಂಟೆಯಿಂದ ರಿಂದ ರಾತ್ರಿ 9 ಗಂಟೆವರಗೆ ನಗರದ ಅಲ್ಲಮಪ್ರಭು ಉದ್ಯಾನವನದಲ್ಲಿ ಪುಷ್ಪಸಿರಿ ಹೆಸರಿನಲ್ಲಿ 62ನೇ ಫಲ-ಪುಷ್ಪ ಪ್ರದರ್ಶನ, ಮಲೆನಾಡು ಕರಕುಶಲದ  ಮೇಳ ಉತ್ಸವ ಹಾಗೂ ಮನರೇಗಾ ಯೋಜನೆಯ ಮಾಹಿತಿ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಇನ್ನೂ ಈ ಫಲಪುಷ್ಷ ಪ್ರದರ್ಶನದಲ್ಲಿ ಈ ಬಾರೀ ವಿಶೇಷವಾಗಿ ರಾಷ್ಟ್ರಕವಿ ಕುವೆಂಪು ಅವರ ಕುಪ್ಪಳಿಯ ಮನೆಯನ್ನು ಪುಷ್ಪಗಳ ಮೂಲಕ ತಯಾರಿ ಮಾಡಿದ್ದು, ಸುಮಾರು 28 ಅಡಿ ಎತ್ತರದ ಹೂವಿನ ಕಲಾಕೃತಿಯ ಕವಿಶೈಲವನ್ನು ನಿರ್ಮಾಣ ಮಾಡಲಾಗುವುದು ಹಾಗೂ ಚಂದ್ರಗುತ್ತಿಯ ರೇಣುಕಾ ದೇವಾಲಯವನ್ನು ಮರುಸೃಷ್ಟಿಸಲಾಗುತ್ತಿದ್ದು ಪ್ರದರ್ಶನದ ಪ್ರಮಖ ಆಕರ್ಷಣೆಯಾಗಲಿದೆ ಎಂದರು.ಈ ಫಲಪುಷ್ಪ ಉತ್ಸವದಲ್ಲಿ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಮಹಿಳೆಯರು ತಯಾರಿಸಿದ 100ಕ್ಕೂ ಹೆಚ್ಚು ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮಾಡಲಾಗುತ್ತದೆ.ಸಾವರ್ಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉತ್ಸವದಲ್ಲಿ ಭಾಗವಹಿಸಿ ಎಂದರು.

SUMMARY | Zilla Panchayat CEO Hemanth N said that a three-day Malnad Festival and Flower Show will be organised at Allamaprabhu Grounds from January 24 to 26

KEYWORDS |  Zilla Panchayat, Flower Show,  Allamaprabhu Grounds, shivamogga,

Leave a Comment