SHIVAMOGGA | MALENADUTODAY NEWS | ಮಲೆನಾಡು ಟುಡೆ Oct 30, 2024
ಲಿಂಗಮಕ್ಕಿ ಡ್ಯಾಂಗೆ ಮುತ್ತಿಗೆ ಹಾಕಿ ಅದನ್ನ ಒಡೆದಾದರೂ ಸರಿಯೇ ಭೂಮಿಯ ಹಕ್ಕು ಪಡೆಯುತ್ತೇವೆ ಎಂದು ಪಾದಯಾತ್ರೆ ಹೊರಟಿದ್ದ ರೈತರನ್ನ ಪೊಲೀಸರು ತಡೆದು ವಶಕ್ಕೆ ಪಡೆದು ಸಾಗರಕ್ಕೆ ವಾಪಸ್ ಕಳುಹಿಸಿದ್ದರು. ಆದಾಗ್ಯು ರೈತರು ತಮ್ಮ ಹೋರಾಟವನ್ನ ಮುಂದುವರಿಸಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಈ ನಡುವೆ ಸರ್ಕಾರ ರೈತರನ್ನ ಮಾತುಕತೆಗೆ ಆಹ್ವಾನಿಸಿದೆ.
ಅ.30ರಂದು ಅಂದರೆ ಇವತ್ತು ಸಂಜೆ 4 ಗಂಟೆಗೆ ವಿಧಾನಸೌಧದ ಕೊಠಡಿ ಸಂಖ್ಯೆ 313ರಲ್ಲಿ ಸಭೆ ನಿಗದಿಯಾಗಿದೆ. ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮತ್ತು ಮುಖ್ಯ ಕಾರ್ಯದರ್ಶಿ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಾಗರ ಉಪ ವಿಭಾಗಾಧಿಕಾರಿ ಮೂಲಕ ಪ್ರತಿಭಟನಾನಿರತ ರೈತರಿಗೆ ಸಭಾ ಸೂಚನಾ ಪತ್ರ ತಲುಪಿಸಲಾಗಿದೆ.ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಕಾನೂನು ಇಲಾಖೆ ಪ್ರಧಾನ ಕಾರ್ಯದರ್ಶಿ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಜಿಲ್ಲಾಧಿಕಾರಿ, ಶಿವಮೊಗ್ಗ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಶಿವಮೊಗ್ಗ, ಭದ್ರಾವತಿ, ಸಾಗರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಶಿವಮೊಗ್ಗ ಮತ್ತು ಸಾಗರ ಉಪ ವಿಭಾಗಗಳ ಸಹಾಯಕ ಆಯುಕ್ತರು ಸಭೆಗೆ ಹಾಜರಾಗಬೇಕು ಎಂದು ಸೂಚಿಸಲಾಗಿದೆ.
ಮಲೆನಾಡು ರೈತ ಹೋರಾಟ ವೇದಿಕೆ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಸಾಗರ ಉಪವಿಭಾಗೀಯ ಕಚೇರಿ ಎದುರು ಮಲೆನಾಡು ರೈತರ ಭೂಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡ ರೈತರು ದೆಹಲಿ ಮಾದರಿ ಯಲ್ಲಿ ವರ್ಷಗಟ್ಟಲೆ ಚಳವಳಿಯನ್ನು ಮುನ್ನಡೆಸಿಕೊಂಡು ಹೋಗುವ ಎಚ್ಚರಿಕೆಯನ್ನ ನೀಡಿದ್ದರು.
SUMMARY | The government has invited malnad farmers for talks as they are on an indefinite sit-in protest demanding a solution to the land problem of malnad farmers under the aegis of Malnad Raitha Porata Vedike and various organisations
KEYWORDS | indefinite sit-in protest called by the Malnad Raitha Porata Vedike, demanding a solution to the land problem of malnad farmers ,