ಮಾಜಿ ಸಿಎಂ ಸಲ್ಲಿಸಿದ್ದ ಅರ್ಜಿಯ ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್​

13

SHIVAMOGGA| MALENADUTODAY NEWS | ಮಲೆನಾಡು ಟುಡೆ  Apr 12, 2025 ‌‌ ‌‌

ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರು ತಮ್ಮ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ಮರು ಪರಿಶೀಲನೆಯ ಆದೇಶವನ್ನು ಪ್ರಶ್ನಿಸಿ ಮೇಲ್ವನವಿಯ ಅರ್ಜಿಯ ತೀರ್ಪರನ್ನು ಸುಪ್ರೀಕೋರ್ಟ್​ ಕಾಯ್ದಿರಿಸಿದೆ. ಕಳೆದ ಏಪ್ರಿಲ್ ನಾಲ್ಕರಂದು ವಿಚಾರಣೆ ಮುಗಿಸಿದ್ದ ಕೋರ್ಟ್​ , ಈ ಬಳಿಕ ತೀರ್ಪು ಕಾದಿರಿಸಿದೆ. 

ಏನಿದು ಪ್ರಕರಣ

ದೇವನಹಳ್ಳಿಯಲ್ಲಿ 2011ರಲ್ಲಿ 26 ಎಕರೆ ಡಿನೋಟಿಫಿಕೇಷನ್‌ ನಲ್ಲಿ ಅಕ್ರಮವೆಸಗಿದ ಆರೋಪದಡಿ ಆಲಂ ಪಾಷಾ ದೂರು ನೀಡಿದ್ದರು. ಆನಂತರ  ಪ್ರಕರಣ ಹೈಕೋರ್ಟ್​ ಮೆಟ್ಟಿಲೇರಿತ್ತು. ಯಡಿಯೂರಪ್ಪ ವಿರುದ್ಧ ತಾವು ನೀಡಿರುವ ದೂರನ್ನು ಮರುಪರಿಶೀಲಿಸುವಂತೆ  ಎ.ಆಲಂ ಪಾಷಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ 2021ರ ಜನವರಿ 5ರಂದು ಮಾನ್ಯ ಮಾಡಿತ್ತು. ಇದನ್ನು ಪ್ರಶ್ನಿಸಿ ಯಡಿಯೂರಪ್ಪ ಅವರು ಸು‍ಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. 

Share This Article