SHIVAMOGGA | MALENADUTODAY NEWS | ಮಲೆನಾಡು ಟುಡೆ | Mar 14, 2025
ಶಿವಮೊಗ್ಗ | ಮಹಿಳಾ ಜಾಗೃತಿ ವೇದಿಕೆ, ಸಹ್ಯಾದ್ರಿ ಮಹಿಳಾ ಪಟ್ಟಣ ಸಹಕಾರ ಬ್ಯಾಂಕ್, ಹಿಂದುಳಿದ ಜನ ಜಾಗೃತಿ ವೇದಿಕೆ, ಮಹಿಳಾ ಘಟಕ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಚೈತನ್ಯ ಸಮಾವೇಶವನ್ನು ಮಾ.17 ರಂದು ಪತ್ರಿಕಾ ಭವನ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಹಿಳಾ ಜಾಗೃತಿ ವೇದಿಕೆಯ ಎಸ್.ವಿ.ರಾಜಮ್ಮ ತಿಳಿಸಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಉದ್ಘಾಟನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಡಿಪಿಓ ಗಂಗೂಬಾಯಿ ನೆರವೇರಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಹಾಗೂ ಸಾಮಾಜಿಕ ಹೋರಾಟಗಾರರಾದ ರಾಧಾ ಸುರೇಶ್ ಮಾತನಾಡಲಿದ್ದಾರೆ. ಅತಿಥಿಗಳಾಗಿ ಎಲ್ಐಸಿ ಡೆವಲಪ್ ಮೆಂಟ್ ಆಫೀಸರ್ ದೀಪಿಕಾ.ಯು, ಸಹ್ಯಾದ್ರಿ ಮಹಿಳಾ ಪಟ್ಟಣ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ವೀರಮ್ಮ, ತೀರ್ಥಹಳ್ಳಿ ಸಾಮಾಜಿಕ ಹೋರಾಟಗಾರರಾದ ಲತಾ ಜೋಯಿಸ್ ಭಾಗವಹಿಸಲಿದ್ದಾರೆ ಎಂದರು.
ಸಮುದಾಯದ ಸಂಘಟಕರಾದ ಸುಕನ್ಯಾ ಮಾತನಾಡಿ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಹಿಳೆಯರು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿಕೊಳ್ಳಲಿ ಎಂಬ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಸಲಾಗಿದೆ. ಇದರ ಸದುಪಯೋಗವನ್ನು ಎಲ್ಲಾ ಮಹಿಳೆಯರು ಪಡೆದುಕೊಳ್ಳಬೇಕು ಎಂದು ಕೋರಿದರು.
SUMMARY | Mahila Chaitanya Conclave will be held on March 17 at Pathrika Bhavan auditorium
KEYWORDS | Mahila Chaitanya, Pathrika Bhavan, shivamogga,