SHIVAMOGGA | MALENADUTODAY NEWS | ಮಲೆನಾಡು ಟುಡೆ
Sep 24, 2024 : SHIVAMOGGA PROTEST
ಒಕ್ಕಲಿಗ ಸಮಾಜದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಹಾಗೂ ಒಕ್ಕಲಿಗ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಸಿ ನಿಂದನೆ ಮಾಡಿರುವ ಆರ್.ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರ ವಿರುದ್ಧ ಕಠಿಣ ಕಾನೂನು ಕ್ರಮ ವಹಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿ ಇಂದು ಶಿವಮೊಗ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿದೆ. ಅಲ್ಲದೆ ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಮನವಿ ನೀಡುವ ಮೂಲಕ , ಶಾಸಕರ ವಿರುದ್ಧ ಕ್ರಮಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.
ಒಕ್ಕಲಿಗ ಹಾಗೂ ದಲಿತ ಹೆಣ್ಣುಮಕ್ಕಳ ಬಗ್ಗೆ ಆಶ್ಲೀಲವಾಗಿ ಮಾತನಾಡಿರುವ ಶಾಸಕ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ಅಮಾನತ್ತುಗೊಳಿಸಿ ಕಠಿಣ ಕೈಗೊಳ್ಳಬೇಕು. ಅವರು ಅತ್ಯಾಚಾರಿ ಹಾಗೂ ಹನಿಟ್ಯಾಪ್ ರೂವಾರಿ ಯಾಗಿದ್ದಾರೆ. ಗುತ್ತಿಗೆದಾರರನ್ನು ಶೋಷಣೆ ಮಾಡಿ ಹಣ ವಸೂಲಿ ಮಾಡಿದ್ದಾರೆ.
ಗುತ್ತಿಗೆದಾರರ ಸಂಭಾಷಣೆಯ ಜೊತೆಯಲ್ಲಿ ಹೆಣ್ಣು ಮಕ್ಕಳ ವಿಷಯವಾಗಿ ಒಕ್ಕಲಿಗ ಹಾಗೂ ಪರಿಶಿಷ್ಟರ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾರೆ ಎಂದು ದೂರಿದರು. ಒಕ್ಕಲಿಗ ಜನಾಂಗ ಈ ನಾಡಿಗೆ ರಾಜಕೀಯವಾಗಿ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅಪಾರ ಕೊಡುಗೆ ನೀಡಿದ್ದು, ಇಂತಹ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಇಡೀ ಒಕ್ಕಲಿಗ ಸಮಾಜಕ್ಕೆ ನೋವುಂಟು ಮಾಡಿದೆ ಅಂಥಾ ಪ್ರತಿಭಟನಾಕಾರರು ಬೇಸರ ವ್ಯಕ್ತಪಡಿಸಿದ್ದಾರೆ.
