SHIVAMOGGA | MALENADUTODAY NEWS | ಮಲೆನಾಡು ಟುಡೆ | Dec 12, 2024
ಶೈಕ್ಷಣಿಕ ಪ್ರವಾಸಕ್ಕೆಂದು ಮುರುಡೆಶ್ವರಕ್ಕೆ ತೆರಳಿ ಅಲ್ಲಿ ಈಜಾಡುವ ಸಂದರ್ಭದಲ್ಲಿ ಸಮುದ್ರಪಾಲಾದ ವಿದ್ಯಾರ್ಥಿನಿಯರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಈ ಹಿಂದೆ ಕೊತ್ತೂರು ಮೂರಾರ್ಜಿ ದೇಸಾಯಿ ವಸತಿ ಶಾಲೆಯ 54 ವಿದ್ಯಾರ್ಥಿಗಳು,ಹಾಗೂ 6 ಶಿಕ್ಷಕರು ಕೋಲಾರದ ಮುಳಬಾಗಿಲಿನಿಂದ ಕಾರವಾರದ ಮುರುಡೇಶ್ವರಕ್ಕೆ ಶೈಕ್ಷಣಿಕ ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ಸಮುದ್ರದಲ್ಲಿ ಆಟವಾಡುತ್ತಿದ್ದಾಗ 4 ಜನ ವಿದ್ಯಾರ್ಥಿನಿಯರ ಶವ ಪತ್ತೆಯಾಗಿತ್ತು.
ಘಟನೆಯ ಸಂಬಂಧ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಸಿಗಲೆಂದು ಕೋರುತ್ತೇನೆ. ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ 5 ಲಕ್ಷ ಪರಿಹಾರ ನೀಡಲಾಗುವುದು. ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿನೀಡುವಾಗ ಮಕ್ಕಳ ಮೇಲೆ ನಿಗಾ ಇಡಬೇಕು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ, ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ. ಎಂದು ತಮ್ಮ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
— Siddaramaiah (@siddaramaiah) December 11, 2024
ಇದರ ನಡುವೆ ನಗರಾಭಿವೃದ್ದಿ ಹಾಗೂ ಪಟ್ಟಣ ಸಚಿವರಾದ ಬೈರತಿ ಸುರೇಶ್ ರವರು ಸಹ ವಿದ್ಯಾರ್ಥಿಗಳ ಕುಟುಂಬಕ್ಕೆ ವೈಯಕ್ತಿಕವಾಗಿ ತಲಾ 5 ಲಕ್ಷ ಕೊಡುವುದಾಗಿ ಘೋಷಿಸಿದ್ದಾರೆ
SUMMARY | Chief Minister Siddaramaiah has announced an ex-gratia of Rs 5 lakh each to the families of the girl students who drowned while swimming in Murudeshwar on an educational tour.
KEYWORDS | Chief Minister Siddaramaiah, Murudeshwar, 5 lakh compensation, karnataka