SHIVAMOGGA | MALENADUTODAY NEWS | ಮಲೆನಾಡು ಟುಡೆ Jan 5, 2025
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಹೆರಿಗೆಯಾದ ಕೆಲವೇ ಗಂಟೆಗಳಲ್ಲಿಯೇ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ. ಎನ್ನಲಾಗಿದೆ. ಅವರನ್ನು ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಶಂಶೀಪುರ ನಿವಾಸಿ ಕವಿತಾ (24) ಎಂದು ಗುರುತಿಸಲಾಗಿದೆ. ಜಿಲ್ಲೆಯ ಮೈದೊಳಲು ಮಲ್ಲಾಪುರ ಗ್ರಾಮದಲ್ಲಿದ್ದ ಕವಿತಾ ಅವರು, ಎರಡನೇ ಹೆರಿಗಾಗಿ ಜನವರಿ 1ರಂದು ಮೆಗ್ಗಾನ್ ಆಸ್ಪತ್ರೆ ಹೆರಿಗೆ ವಾರ್ಡ್‌ಗೆ ದಾಖಲಾಗಿದ್ದರು. ಆ ಬಳಿಕ ಜನವರಿ 3ರಂದು ಬೆಳಗ್ಗೆ ಕವಿತಾ ಅವರಿಗೆ ಸಹಜ ಹೆರಿಗೆಯಾಗಿತ್ತು. ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದರು. ತದನಂತರ ವಾರ್ಡ್‌ಗೆ ಶಿಫ್ಟ್ ಮಾಡಲಾಗಿತ್ತು. ಆನಂತರ ಅವರು ಸಾವನ್ನಪ್ಪಿದ್ದಾರೆ.
ಇನ್ನೂ ಬಗ್ಗೆ ಮಾತನಾಡಿರುವ ಮೆಗ್ಗಾನ್ ಆಸ್ಪತ್ರೆ ಅಧೀಕ್ಷಕ ಡಾ.ತಿಮ್ಮಪ್ಪ ಅವರು ಹೆರಿಗೆಯಾದ ಎರಡು ಗಂಟೆ ನಂತರ, ದಿಢೀರ್ ಆಗಿ ಮಹಿಳೆಯಲ್ಲಿ ತೀವ್ರ ಸ್ವರೂಪದ ರಕ್ತಸ್ರಾವ ಸಮಸ್ಯೆ ಕಾಣಿಸಿಕೊಂಡಿತ್ತು. ತಕ್ಷಣವೇ ಅವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಅವರಿಗೆ ಹೃದಯಾಘಾತವಾಗಿತ್ತು. ಸಾಕಷ್ಟು ವೈದ್ಯೋಪಚಾರದ ನಡುವೆಯೂ ಅವರು ಬದುಕುಳಿಯಲಿಲ್ಲ ಎಂದು ತಿಳಿಸಿದ್ದಾರೆ.
SUMMARY | mother died at Meggan Hospital in Shivamogga, Meggan Superintendent Dr Thimmappa
KEY WORDS | mother died at Meggan Hospital in Shivamogga, Meggan Superintendent Dr Thimmappa