SHIVAMOGGA | MALENADUTODAY NEWS | ಮಲೆನಾಡು ಟುಡೆ Oct 18, 2024
ರಸ್ತೆ ಡಿವೈಡರ್ 407 ಡಿಕ್ಕಿ
407 ವಾಹನವೊಂದು ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಸ್ತೆಯ ಡಿವೈಡರ್‌ಗೆ ಡಿಕ್ಕಿಯಾದ ವಾಹನ ಅಲ್ಲಿಯೇ ಜಾಮ್ ಆಗಿತ್ತು. ಪರಿಣಾಮ ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಟೋ ವಾಹನದ ಮೂಲಕ ವೆಹಿಕಲ್‌ನ್ನ ಸ್ಥಳಾಂತರಿಸಿದರು. ಅದೃಷ್ಟಕ್ಕೆ ಘಟನೆಯಲ್ಲಿ ಯಾರಿಗೂ ಅಪಾಯ ಉಂಟಾಗಿಲ್ಲ
ಕುರಿಕಳ್ಳ ಸಿಕ್ಕಿಬಿದ್ದ
ಇತ್ತ ತುಂಗಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕುರಿಕಳ್ಳತನ ಮಾಡಲು ಬಂದ ವ್ಯಕ್ತಿಯೊಬ್ಬ ಸ್ಥಳೀಯರ ಕೈಗೆ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಈ ಸಂಬಂಧ ವ್ಯಕ್ತಿಯನ್ನ ಹಿಡಿದ ಜನರು ಆ ಬಳಿಕ ಆತನನ್ನ ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಬಂದು ಸ್ಥಳೀಯರಿಂದ ಮಾಹಿತಿ ಪಡೆದು ಆರೋಪಿಯನ್ನ ವಶಕ್ಕೆ ಪಡೆದ ಪೊಲೀಸರು ಈ ಸಂಬಂಧ ವಿಚಾರಣೆ ನಡೆಸ್ತಿದ್ದಾರೆ.
ಮಾನಸಿಕ ಮಹಿಳೆಯ ಕಿರಿಕಿರಿ
ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಬಸ್ ನಿಲ್ದಾಣದ ಪ್ರಯಾಣಿಕರಿಗೆ ಸಮಸ್ಯೆ ಮಾಡುತ್ತಿದ್ದ ಬಗ್ಗೆ ವರದಿಯಾಗಿದೆ. ಈ ಸಂಬಂಧ ಅಲ್ಲಿದ್ದವರು ಪೊಲೀಸರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆಕೆಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸ್ತಿದ್ದಾರೆ.
SUMMARY | Shivamogga Faste news
KEYWORDS | Shivamogga Rural Police Station, Tunganagar Police Station, Shivamogga Doddapet Police Station, Shivamogga Bus Stand