ರಾಷ್ಟ್ರೀಯ ಸೈನಿಕ ಸ್ಮಾರಕದ ಸಹಾಯಕ ಪರಿಪಾಲಕ ನೇಮಕಾತಿಗಾಗಿ ಅರ್ಜಿ ಆಹ್ವಾನ |  ಯಾರೆಲ್ಲ ಅರ್ಜಿ ಸಲ್ಲಿಸಬಹುದು

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 28, 2025

ಶಿವಮೊಗ್ಗ | ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಹೊರಗುತ್ತಿಗೆ ಮೂಲಕ ತಾತ್ಕಾಲಿಕವಾಗಿ ರಾಷ್ಟ್ರೀಯ ಸೈನಿಕ ಸ್ಮಾರಕದ ಸಹಾಯಕ ಮೇಲ್ವಿಚಾರಕ ಹುದ್ದೆಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಹುದ್ದೆಗೆ  ಜೆ.ಸಿ.ಓ. ರ‍್ಯಾಂಕ್‌ನಿಂದ ನಿವೃತ್ತರಾಗಿರುವ ಕನ್ನಡವನ್ನು ಸರಳವಾಗಿ ಮಾತನಾಡಲು, ಓದಲು, ಬರೆಯಲು ಹಾಗೂ ಗಣಕ ಯಂತ್ರದಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಪತ್ರ ತಯಾರಿಸುವ ಕೌಶಲ್ಯವುಳ್ಳ 55 ವರ್ಷದೊಳಗಿನ ಮಾಜಿ ಸೈನಿಕರಿಂದ ಅರ್ಜಿ ಸಲ್ಲಿಸಬಹುದು

ಆಸಕ್ತರು ಅರ್ಜಿ ನಮೂನೆಯನ್ನು ಇಲಾಖೆಯ ವೆಬ್‌ಸೈಟ್ http://sainikwelfare.karnataka.gov.in ರಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಇ-ಮೇಲ್ [email protected]  ರ ಮೂಲಕ ಅಥವಾ ಅಂಚೆ ಮೂಲಕ ಏಪ್ರಿಲ 10 ರೊಳಗಾಗಿ ಸಲ್ಲಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ ಡಾ. ಸಿ.ಎ.ಹಿರೇಮಠರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 080-25589459 ನ್ನು ಸಂಪರ್ಕಿಸುವುದು.

SUMMARY | Applications are invited for the post of Assistant Supervisor of National Sainik Memorial.

KEYWORDS | Applications,  Assistant Supervisor, National Sainik Memorial,

Leave a Comment

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು