SHIVAMOGGA | MALENADUTODAY NEWS | ಮಲೆನಾಡು ಟುಡೆ
Sep 28, 2024 | SHIVAMOGGA TRAIN USERS | ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಶಿವಮೊಗ್ಗಕ್ಕೆ ಬಂದು ವಂದೇ ಭಾರತ್ ಟ್ರೈನ್ ಬಗ್ಗೆ ಭರವಸೆಯ ಮಾತುಗಳನ್ನ ಆಡಿದ್ದರು. ಜೊತೆಯಲ್ಲಿ ಶಿವಮೊಗ್ಗದ ವಿವಿಧ ರೈಲ್ವೆ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ್ದ ಅವರು ಸಾರ್ವಜನಿಕರ ಅಹವಾಲುಗಳನ್ನ ಸಹ ಆಲಿಸಿದ್ದರು. ಇದರ ನಡುವೆ ಶಿವಮೊಗ್ಗದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಶಿವಮೊಗ್ಗ ರೈಲ್ವೆ ಅಭಿವೃದ್ಧಿ ಹಾಗೂ ಸಾರ್ವಜನಿಕರ ಅನುಕೂಲಕ್ಕೆ ಪೂರಕವಾಗಿ ಕೆಲವು ಬೇಡಿಕೆಗಳನ್ನ ಸಚಿವ ಸೋಮಣ್ಣರ ಮುಂದಿಟ್ಟಿತ್ತು. ಶಿವಮೊಗ್ಗಕ್ಕೆ ಅಗತ್ಯವಿರುವ ರೈಲ್ವೆ ಸೌಕರ್ಯಗಳನ್ನು ಒದಗಿಸುವಂತೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಮನವಿ ಸಹ ಸಲ್ಲಿಸಿದ್ದರು. ಈ ಪೈಕಿ ಸೋಮಣ್ಣರ ಗಮನಸೆಳೆದಿರುವ ಬೇಡಿಕೆಯ ಲಿಸ್ಟ್ ಸಾಕಷ್ಟು ಕುತೂಹಲ ಮೂಡಿಸ್ತಿದೆ.
SHIVAMOGGA TRAIN USERS
ಶಿವಮೊಗ್ಗ-ತುಮಕೂರು ಪ್ಯಾಸೆಂಜರ್ ರೈಲು ಸಂಚಾರವನ್ನು ಬೆಂಗಳೂರಿನವರೆಗೂ ವಿಸ್ತರಿಸಬೇಕು ಹಾಗೂ ಪುನಃ ವಾಪಸ್ ಬೆಂಗಳೂರು-ಶಿವಮೊಗ್ಗ ಪ್ಯಾಸೆಂಜರ್ ರೈಲು ಸಂಚಾರ ವ್ಯವಸ್ಥೆ ಕಲ್ಪಿಸಬೇಕು
ಶಿವಮೊಗ್ಗ-ಬೆಂಗಳೂರು ಜನಶತಾಬ್ಧಿ ರೈಲು ಸಂಚಾರವನ್ನು ಬೆಳಗ್ಗೆ 5.45ಕ್ಕೆ ನಿಗದಿಪಡಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕು.
ಪ್ರಯಾಣಿಕರ ಅನುಕೂಲಕ್ಕಾಗಿ ಶಿವಮೊಗ್ಗ-ಯಶವಂತಪುರ ರೈಲು ಸಂಚಾರ ಮಧ್ಯಾಹ್ನ 3ಕ್ಕೆ ಆರಂಭಿಸಬೇಕು.
ಯಶವಂತಪುರ-ಶಿವಮೊಗ್ಗ ರೈಲು ವಾರಕ್ಕೆ ಮೂರು ದಿನ ಬದಲಾಗಿ ಪ್ರತಿ ದಿನ ಸಂಚರಿಸುವಂತೆ ಕ್ರಮ ಕೈಗೊಳ್ಳಬೇಕು ಹಾಗೂ ಚೆನ್ನೆವರೆಗೂ ಸಂಚಾರ ವಿಸ್ತರಿಸಬೇಕು
ಶಿವಮೊಗ್ಗ-ರೇಣಿಗುಂಟ-ಚೆನ್ನೈ ರೈಲು ಸಂಚಾರ ಮೂರು ತಿಂಗಳ ಹಿಂದೆ ಸ್ಥಗಿತಗೊಂಡಿದ್ದು, ಪುನಃ ವಾರದಲ್ಲಿ ಎರಡು ಅಥವಾ ಮೂರು ಬಾರಿ ಸಂಚಾರ ಆರಂಭಿಸಬೇಕು ಇದರಿಂದ ತಿರುಪತಿ ಪ್ರಯಾಣಿಕರಿಗೂ ಅನುಕೂಲವಾಗಲಿದೆ.
ಕುವೆಂಪು ಎಕ್ಸ್ಪ್ರೆಸ್ ರೈಲು ವೇಗ ಹೆಚ್ಚಿಸಲು ಕ್ರಮವಹಿಸಿ ಸಂಚಾರ ಸಮಯ ಕಡಿಮೆಗೊಳಿಸಬೇಕು. ಕೋಟೆಗಂಗೂರು ಕೋಚಿಂಗ್ ಡಿಪೋ ಕಾಮಗಾರಿ ವೇಗಗೊಳಿಸಬೇಕು ಎಂದು ಮನವಿ ಮಾಡಿದರು.
ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಆಟೋ ಸಂಚಾರ ಸಮರ್ಪಕ ಆಗುವಂತೆ ಕ್ರಮ ವಹಿಸಬೇಕು. ರೈಲು ಆಗಮಿಸುವ ಸಂದರ್ಭದಲ್ಲಿ ಉಂಟಾಗುತ್ತಿರುವ ಟ್ರಾಫಿಕ್ ಸಮಸ್ಯೆಯನ್ನು ಪರಿಹರಿಸಲು ಕ್ರಮ ಕೈಗೊಳ್ಳುವಂತೆ ರೈಲ್ವೆ ಪೊಲೀಸರಿಗೆ ಸೂಚಿಸಬೇಕು.
ಮಾಜಿ ಎಂಎಲ್‌ಸಿ ಎಸ್.ರುದ್ರೇಗೌಡ, ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಡಾ. ಧನಂಜಯ ಸರ್ಜಿ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್, ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ರೈಲ್ವೆ ಸಮಿತಿ ಅಧ್ಯಕ್ಷ ಎಸ್.ಎಸ್.ಉದಯಕುಮಾರ್, ಖಜಾಂಚಿ, ಆರ್.ಮನೋಹರ, ಮಾಜಿ ಅಧ್ಯಕ್ಷರಾದ ಅಶ್ವತ್ಥನಾರಾಯಣ ಶೆಟ್ಟಿ, ಮಹೇಂದ್ರಪ್ಪ, ನಿರ್ದೇಶಕರಾದ ಪಿ.ರುದ್ರೇಶ್, ಗಣೇಶ್ ಅಂಗಡಿ, ವಿನೋದ್‌ಕುಮಾರ್, ಜಿ.ವಿ.ಕಿರಣ್‌ಕುಮಾರ್, ಸಿ.ಎ.ಶರತ್, ಎನ್.ಪಿ.ಶಂಕರ್, ಡಾ. ಲಕ್ಷ್ಮೀದೇವಿ ಗೋಪಿನಾಥ್, ಸಂಘದ ನಿರ್ದೇಶಕರು, ಪದಾಧಿಕಾರಿಗಳು ಸೋಮಣ್ಣರಿಗೆ ಮನವಿ ಕೊಡುವ ಸಂದರ್ಭದಲ್ಲಿ ಉಪಸ್ಥಿತರಿದ್ದರು.