SHIVAMOGGA | MALENADUTODAY NEWS | Aug 14, 2024 ಮಲೆನಾಡು ಟುಡೆ
ಶಿವಮೊಗ್ಗದ ಮಲವಗೊಪ್ಪದ ಬಳಿ ರೈಲ್ವೆ ಹಳಿ ಮೇಲೆ ಪುರಷರೊಬ್ಬರ ಮೃತದೇಹ ಪತ್ತೆಯಾಗಿದೆ. ಇವರನ್ನ ಹೋಮ್ ಗಾರ್ಡ್ ಡ್ಯೂಟಿ ಮಾಡುವ ಮಂಜುನಾಥ್ ಎಂದು ಗುರುತಿಸಲಾಗಿದೆ. ಮೇಲ್ನೋಟಕ್ಕೆ ಇವರು ರೈಲಿಗೆ ಸಿಲುಕಿ ಸಾವನ್ನಪ್ಪಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಶಿವಮೊಗ್ಗ ರೈಲ್ವೆ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಡಿದು ವಾಹನ ಚಾಲನೆ, ಮೂವರಿಗೆ ದಂಡ
ಜೋಗ ಜಲಪಾತ ನೋಡಲು ಸಾವಿರಾರು ಮಂದಿ ಬರುತ್ತಿದ್ದು, ಈ ನಡುವೆ ಮದ್ಯಪಾನಿಗಳ ಹಾವಳಿ ಹೆಚ್ಚಾಗುತ್ತಿದೆ. ಇದಕ್ಕೆ ಪೂರಕ ಎಂಬಂತೆ ಜೋಗ ಜಲಪಾತ ನೋಡಲು ಆಗಮಿಸಿದ್ದ ಮೂವರು ಕುಡಿದು ವಾಹನ ಚಾಲನೆ ಮಾಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಕಾರ್ಗಲ್ ಠಾಣೆ ಪೊಲೀಸರು ಮೊಕದ್ದಮೆ ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಮೂವರಿಗೆ ತಲಾ 8000 ರೂ. ಗಳಂತೆ ಒಟ್ಟು 24,000 ರೂ. ದಂಡ ವಿಧಿಸಿ ಆದೇಶಿಸಿದೆ.
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ