SHIVAMOGGA| MALENADUTODAY NEWS | ಮಲೆನಾಡು ಟುಡೆ Mar 15, 2025
ರೈಲ್ವೆ ಪ್ರಯಾಣಿಕರಿಗೆ ಸಂಬಂಧಿಸಿದಂತೆ ಮತ್ತೊಂದು ಸ್ಪಷ್ಟತೆಯನ್ನು ನೈರುತ್ಯ ರೈಲ್ವೆ ವಿಭಾಗ ನೀಡಿದೆ. ಶಿವಮೊಗ್ಗ ಮೈಸೂರು ನಡುವೆ ಸಂಚರಿಸುವ ರೈಲಿನ ಸಂಚಾರದಲ್ಲಿ ತಾತ್ಕಾಲಿಕವಾಗಿ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.
ಶಿವಮೊಗ್ಗ ಮೈಸೂರು ನಡುವಿನ ಎಕ್ಸ್‌ಪ್ರೆಸ್ ರೈಲು ಸಂಚಾರದಲ್ಲಿ, ಮೈಸೂರಿನಿಂದ ಶಿವಮೊಗ್ಗದವರೆಗೂ ಸಂಚರಿಸುವ ಡೈಲಿ ಎಕ್ಸ್‌ಪ್ರೆಸ್ ರೈಲಿನ ಸಂಚಾರದಲ್ಲಿ ಮುಂದಿನ ನಿಗದಿತ ದಿನಾಂಕದವರೆಗೂ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ನೈರುತ್ಯ ರೈಲ್ವೆ ವಿಭಾಗ
ಹಾಸನ ಮತ್ತು ಮಾವಿನಕೆರೆ ನಿಲ್ದಾಣಗಳಲ್ಲಿ ಹಳಿ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದ್ದು, ಈ ಕಾರಣಕ್ಕಾಗಿ ಮಾರ್ಚ್ 13 ರಿಂದ ಮೇ 6, 2025 ರವರೆಗೆ ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 16225 ಮೈಸೂರು-ಶಿವಮೊಗ್ಗ ಟೌನ್ ಡೈಲಿ ಎಕ್ಸ್ ಪ್ರೆಸ್ ರೈಲು ಮಾರ್ಗದಲ್ಲಿ 80 ನಿಮಿಷಗಳ ಕಾಲ ತಡವಾಗಿ ಸಂಚರಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.