SHIVAMOGGA | MALENADUTODAY NEWS | ಮಲೆನಾಡು ಟುಡೆ | Apr 9, 2025
ಸ್ಮಾರ್ಟ್ ಸಿಟಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಇಂದು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಹೊರಗುತ್ತಿಗೆಯಲ್ಲಿ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೃಷ್ಣಪ್ಪ ಲೋಕಾಯುಕ್ತ ಬಲೆಗೆ ಸಿಕ್ಕ ಅಧಿಕಾರಿಯಾಗಿದ್ದಾರೆ.
ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಕೃಷ್ಣಪ್ಪ 4 ವರ್ಷದ ಹಿಂದೆ ರಿಟೇರ್ಡ್ ಆಗಿದ್ದರು. ನಂತರ ಹೊರ ಗುತ್ತಿಗೆ ಆಧಾರದ ಮೇಲೆ ಸ್ಮಾರ್ಟ್ ಸಿಟಿಯಲ್ಲಿ ಸ್ಮಾರ್ಟ್ ಸಿಟಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿ ನೇಮಕ ಗೊಂಡಿದ್ದರು. ಸೈಟ್ ಎಕ್ಸಿಕ್ಯೂಟಿವ್ ಪವನ್ ಎಂ ಎಸ್ ಎಂಬುವವರಿಂದ ಬಿಲ್ ಪಾಸ್ ಮಾಡಿಸಲು 1 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಆ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಕೃಷ್ಣಪ್ಪ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.
SUMMARY | A smart city executive engineer was caught by the Lokayukta today. Krishnappa, who was working as an engineer in outsourcing, is the officer who was trapped by the Lokayukta.
KEYWORDS | smart city, executive engineer, Krishnappa,