ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 26 2025 : ಶಿವಮೊಗ್ಗ ಜಿಲ್ಲಾ ಪೊಲೀಸರು ಸಾರ್ವಜನಿಕರಲ್ಲಿ ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮ ಮೂಡಿಸಲಾಗುತ್ತಿದೆ. ಈ ಸಂಬಂಧ ಸೊರಬ ಹಾಗೂ ಶಿಕಾರಿಪುರದಲ್ಲಿ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಮಹತ್ವದ ಬಗ್ಗೆ ಪೊಲೀಸರು ವಿಭಿನ್ನವಾಗಿ ಮನವರಿಕೆ ಮಾಡಿಕೊಟ್ಟರು. ದ್ವಿಚಕ್ರವಾಹನ ಸವಾರರಿಗೆ ಗುಲಾಬಿ ಹೂವನ್ನ ನೀಡುವ ಮೂಲಕ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲಾಗಿದೆ.
ಸೊರಬ ವೃತ್ತದಲ್ಲಿ, ಸಿಪಿಐ ರಾಜಶೇಖರ್ ಮತ್ತು ಸೊರಬ ಪೊಲೀಸ್ ಠಾಣೆಯ ಎಸ್ಐ ನವೀನ್ ಅವರ ನೇತೃತ್ವದಲ್ಲಿ ಜಾಗೃತಿ ಅಭಿಯಾನವನ್ನು ಕೈಗೊಳ್ಳಲಾಗಿತ್ತು. ಈ ವೇಳೆ ಸಾರ್ವಜನಿಕರ ಗಮನ ಸೆಳೆಯಲು ಮತ್ತು ಹೆಲ್ಮೆಟ್‌ನ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಪ್ರಾತ್ಯಕ್ಷಿಕೆಯನ್ನು ಕೈಗೊಳ್ಳಲಾಯ್ತು. ಈ ಪ್ರಾತ್ಯಕ್ಷಿಕೆಯಲ್ಲಿ ಕಲ್ಲಂಗಡಿ ಹಣ್ಣನ್ನು ನೇರವಾಗಿ ನೆಲದ ಮೇಲೆ ಬೀಳಿಸಿ ಅದು ಒಡೆಯುತ್ತದೆ ಎಂದು ತೋರಿಸಿ ಅದೇ ಕಲ್ಲಂಗಡಿಯನ್ನು ಹೆಲ್ಮೆಟ್ನೊಳಗೆ ಇರಿಸಿ ಬೀಳಿಸಿದಾಗ ಕಲ್ಲಂಗಡಿಯು ಒಡೆಯುವುದಿಲ್ಲ ಎಂದು ಪೊಲೀಸರು ತಿಳಿಸಿ ಹೇಳಿದರು.
ಇತ್ತ ಶಿಕಾರಿಪುರ ಉಪವಿಭಾಗದಲ್ಲಿ ಡಿವೈಎಸ್ಪಿ ಕೇಶವ್ ನೇತೃತ್ವದಲ್ಲಿ ಶಿಕಾರಿಪುರ ಉಪ ವಿಭಾಗದ ವ್ಯಾಪ್ತಿಗೆ ಬರುವ ಶಿಕಾರಿಪುರ ಟೌನ್, ಆನವಟ್ಟಿ, ಶಿಕಾರಿಪುರ ಗ್ರಾಮಾಂತರ ಮತ್ತು ಶಿರಾಳಕೊಪ್ಪ ಪೊಲೀಸ್ ಠಾಣೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆಯಾ ಪ್ರದೇಶಗಳ ಪ್ರಮುಖ ವೃತ್ತ ಮತ್ತು ರಸ್ತೆಗಳಲ್ಲಿ ಸವಾರರಿಗೆ ಅರಿವು ಮೂಡಿಸಿದರು.
ಈ ವೇಳೆ ನಿಮ್ಮ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಧರಿಸುವುದು (Mandatory) ಅನಿವಾರ್ಯ ಎಂದು ಪೊಲೀಸರು ವಾಹನ ಸವಾರರಿಗೆ ಗುಲಾಬಿ ಹೂವನ್ನ ನೀಡಿ ಜಾಗೃತಿ ಮೂಡಿಸಿದರು.






ಇದನ್ನು ಸಹ ಓದಿ : ಸ್ವಾತಿ ಪ್ರೇಮ ಪ್ರಕರಣ, ನಿಜಕ್ಕೂ ನಡೆದಿದ್ದೇನು, ಕೊಲೆನಾ.? ಆತ್ಮಹತ್ಯೆನಾ.? ಕಿರುಕುಳನಾ.? ಜೆಪಿ ಬರೆಯುತ್ತಾರೆ
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
