SHIVAMOGGA | MALENADUTODAY NEWS | ಮಲೆನಾಡು ಟುಡೆ | Apr 5, 2025
ಶಿವಮೊಗ್ಗ | ಹಾಸ್ಟೆಲ್ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿರುವ ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ವಿರುದ್ಧ ವಿದ್ಯಾರ್ಥಿನಿಯರು ದೂರು ನೀಡಿದ್ದರೂ ಅದರ ಬಗ್ಗೆ ಕ್ರಮ ಕೈಗೊಳ್ಳದೇ ತಪ್ಪಿತಸ್ಥ ಅಧಿಕಾರಿಯನ್ನು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಲ್ಲೇಶಪ್ಪ ರಕ್ಷಿಸುತ್ತಿದ್ದಾರೆ ಎಂದು ಜಿಲ್ಲಾ ಎನ್.ಎಸ್.ಯು.ಐ. ಆರೋಪಿಸಿದೆ.
ಏನಿದು ಘಟನೆ
ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿಯೊಬ್ಬರು ಶಿವಮೊಗ್ಗದ ಜಿಲ್ಲೆಯೊಂದರ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದ್ದರು. ಈ ಹಿನ್ನಲೆ ವಿದ್ಯಾರ್ಥಿನಿಯರು ಸಂಬಂಧ ಪಟ್ಟ ಅಧಿಕಾರಿಗಳಿಗೆ ದೂರನ್ನು ನೀಡಿದ್ದರು ಆದರೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಎನ್.ಎಸ್.ಯು.ಐ. ಜಿಲ್ಲಾಧ್ಯಕ್ಷ ವಿಜಯಕುಮಾರ್, ನೊಂದ ವಿದ್ಯಾರ್ಥಿನಿ ಸಮಾಜ ಕಲ್ಯಾಣ ಇಲಾಖೆ ಆಯುಕ್ತರಿಗೆ ದೂರು ನೀಡಿದ್ದು, ಆಯುಕ್ತರು ವಿಚಾರಣೆ ನಡೆಸುವಂತೆ ನೋಡಲ್ ಅಧಿಕಾರಿಗೆ ಸೂಚನೆ ನೀಡಿದ್ದಾರೆ. ನೋಡಲ್ ಅಧಿಕಾರಿ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದ್ದರೂ ಅವರು ತನಿಖೆ ನಡೆಸದೇ ತಪ್ಪಿತಸ್ಥ ಅಧಿಕಾರಿಯನ್ನು ರಕ್ಷಿಸುತ್ತಿದ್ದಾರೆ ಎಂದು ದೂರಿದ್ದಾರೆ.
ನೋಡಲ್ ಅಧಿಕಾರಿ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ತಪ್ಪಿತಸ್ಥ ಅಧಿಕಾರಿಯೊಡನೆ ಶಾಮೀಲಾಗಿ ವಿವಾದವನ್ನು ಮುಚ್ಚಿ ಹಾಕಲು ಸಹಾಯ ಮಾಡುತ್ತಿದ್ದಾರೆ ಎಂದು ಅನುಮಾನಗಳು ಹುಟ್ಟುತ್ತಿದೆ . ಕೂಡಲೇ ಇನ್ನೆರಡು ದಿನಗಳಲ್ಲಿ ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ವಿರುದ್ಧ ಕ್ರಮ ಕೈಗೊಂಡು ನೊಂದ ವಿದ್ಯಾರ್ಥಿನಿಯರಿಗೆ ನ್ಯಾಯ ಒದಗಿಸಬೇಕು ಹಾಗೂ ವಿದ್ಯಾರ್ಥಿನಿ ನಿಲಯದಲ್ಲಿರುವ ವಿದ್ಯಾರ್ಥಿ ನಿಯರಿಗೆ ಯಾವುದೇ ರೀತಿಯ ಸಮಸ್ಯೆಗಳು ಆಗದಂತೆ ನೋಡಿಕೊಳ್ಳಬೇಕು ಯಾವುದೇ ರೀತಿಯ ಸಾಕ್ಷಿ ನಾಶವಾಗಬಾರದು ಇಲ್ಲವಾದಲ್ಲಿ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಎನ್.ಎಸ್.ಯು.ಐ. ವತಿಯಿಂದ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು. ಅಲ್ಲದೇ ಸಮಾಜ ಕಲ್ಯಾಣ ಖಾತೆ ಸಚಿವರಿಗೆ ಮಲ್ಲೇಶಪ್ಪ ಮತ್ತು ಸುರೇಶ್ ವಿರುದ್ಧ ದೂರು ನೀಡಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
SUMMARY | Suresh, a taluk officer of the social welfare department, was harassing the girl students in a hostel in a district in Shivamogga district
KEYWORDS | Suresh, harassing, girl students, Shivamogga,