SHIVAMOGGA| MALENADUTODAY NEWS | ಮಲೆನಾಡು ಟುಡೆ Mar 13, 2025
ಸುದ್ದಿ 1 : ರಸ್ತೆ ಅಪಘಾತ, ಬೈಕ್ ಸವಾರ ಸಾವು | ಶಿವಮೊಗ್ಗ ಸಕ್ರೆಬೈಲ್ ಆನೆ ಬಿಡಾರದ ಬಳಿ, ಸಂಭವಿಸಿದ ಅಪಘಾತದ್ಲಲಿ ಸಿಗೇಹಟ್ಟಿ ನಿವಾಸಿಯೊಬ್ಬರು ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿಗೆ ಹೋಗಿ ಬೈಕ್‌ನಲ್ಲಿ ವಾಪಸ್ ಬರುತ್ತಿದ್ದ ವೇಳೆ ಶಿವಮೊಗ್ಗದಿಂದ ಮಂಗಳೂರಿಗೆ ಹೋಗುತ್ತಿದ್ದ ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಗಿರೀಶ್ ಎಂಬವರು ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ 2 : ಅಗ್ನಿ ಆಕಸ್ಮಿಕ , ನಷ್ಟ | ಭದ್ರಾವತಿ ತಾಲ್ಲೂಕು ಕಂಚಿನ ಬಾಗಿಲಿನಲ್ಲಿರುವ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಲಾಗಿವೆ. ಘಟನೆಯಲ್ಲಿ ಯಾರಿಗೂ ಪ್ರಾಣಪಾಯ ಉಂಟಾಗಿಲ್ಲ. ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನೆಡೆಸಿ ಬೆಂಕಿ ನಂದಿಸಿದ್ದಾರೆ.
ಸುದ್ದಿ 3 : ಚಿರತೆ ದಾಳಿ ಹಸು ಸಾವು | ಶಿವಮೊಗ್ಗ ತಾಲೂಕಿನ ರಾಮಿನಕೊಪ್ಪ ಮತ್ತು ಹೊಸಕೊಪ್ಪ ಗ್ರಾಮಗಳ ಮಧ್ಯೆ ಇರುವ ಅಡಿಕೆ ತೋಟದಲ್ಲಿ ಚಿರತೆ ದಾಳಿ ಮಾಡಿ ಎರಡು ಹಸುಗಳನ್ನ ಬಲಿ ಪಡೆದಿದೆ. ಈ ಭಾಗದಲ್ಲಿ ಇತ್ತೀಚೆಗೆ ಕಾಡಾನೆ ಹಾವಳಿ ಜಾಸ್ತಿಯಾಗಿತ್ತು. ಇದೀಗ ಚಿರತೆ ದಾಳಿ ಮಾಡಿರೋದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯ ರೈತರು ಮತ್ತು ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒತ್ತಾಯ ಮಾಡಿದ್ದಾರೆ.
ಸುದ್ದಿ 4 : ಸಾಗರ ಪೇಟೆಯಲ್ಲಿ ದಿಢೀರ್ ಪ್ರತಿಭಟನೆ | ಸಾಗರ ಪೇಟೆಯಲ್ಲಿ ರಾಷ್ಟ್ರಿಯ ಹೆದ್ದಾರಿ ಅಗಲೀಕರಣ ಕಾಮಗಾರಿಯಲ್ಲಿ ಬಡವರು ಶ್ರೀಮಂತರು ಎಂದು ತಾರತಮ್ಯವೆಸಗಲಾಗುತ್ತಿದೆ ಎಂದು ಆರೋಪಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ಹೆದ್ದಾರಿಯ ಅಗಲೀಕರಣದ ನಿಮಿತ್ತ ಸದ್ಯ ಒಳಚರಂಡಿ ಕಾಮಗಾರಿ ನಡೆಯುತ್ತಿದ್ದು, ಶ್ರೀಮಂತರು ಹಾಗೂ ಪ್ರಭಾವಿಗಳ ಕಟ್ಟಡಗಳಿಗೆ ಹಾನಿಯಾಗದಂತೆ ಕಾಮಗಾರಿಗಳನ್ನು ನಡೆಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ.
ಸುದ್ದಿ 5 : ವಿಧಾನಸೌಧದ ಎದುರು ಶಾಸಕರ ಪ್ರತಿಭಟನೆ | ಗ್ಯಾರಂಟಿ ಅನುಷ್ಠಾನ ಸಮಿತಿಗಾಗಿ ರಾಜ್ಯದ ಜನರ ತೆರಿಗೆ ಹಣವನ್ನು ದುರುಪಯೋಗ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಶಾಸಕರುಗಳು ವಿಧಾನ ಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ ಸುರೇಶ್ ಬಾಬು, ಜೆಡಿಎಸ್ ವಿಧಾನ ಪರಿಷತ್‌ನ ನಾಯಕರಾದ ಶ್ರೀ ಭೋಜೆಗೌಡ, ಬಿಜೆಪಿ ಮತ್ತು ಜೆಡಿಎಸ್‍ನ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.