SHIVAMOGGA | MALENADUTODAY NEWS | ಮಲೆನಾಡು ಟುಡೆ
Sep 26, 2024 | CONGRESS PROTEST | ಶಿಕಾರಿಪುರದಲ್ಲಿ ಸಿದ್ದರಾಮಯ್ಯ ಪರವಾಗಿ ಅಹಿಂದಾ ಒಕ್ಕೂಟ ಶಿಕಾರಿಪುರ ಬಂದ್ ನಡೆಸಿದೆ. ಇತ್ತ ಜಿಲ್ಲಾ ಕೇಂದ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.
ಶಿವಮೊಗ್ಗದ ಗಾಂಧಿ ಪಾರ್ಕ್‌ನಲ್ಲಿರುವ ಗಾಂಧಿ ಪ್ರತಿಮೆ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನ ಬೆಂಬಲಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಜ್ಞಾ ಕಾರ್ಯಕ್ರಮ ನಡೆಸಿದೆ.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯಬೇಕು ಎಂದು ಈ ವೇಳೆ ಆಗ್ರಹಿಸಿದ ಮುಖಂಡರು, ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ನೀಡದಿರಿ, ಸಿದ್ದರಾಮಯ್ಯ ನವರೇ ನಿಮ್ಮ ಜೊತೆ ನಾವಿದ್ದೇವೆ ಎಂದು ಘೋಷಣೆಗಳನ್ನ ಕೂಗಿದರು.