SHIVAMOGGA | MALENADUTODAY NEWS | ಮಲೆನಾಡು ಟುಡೆ | Dec 26, 2024
ಶಿವಮೊಗ್ಗ | ಮೈಸೂರು ಜಿಲ್ಲೆಯ ಸುತ್ತೂರು ಕ್ಷೇತ್ರದ ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವವು 2025 ಜನವರಿ 26 ರಿಂದ 31 ರವರೆಗೆ ಶ್ರೀ ಸುತ್ತೂರು ಶ್ರೀಕ್ಷೇತ್ರದಲ್ಲಿ ನಡೆಯಲಿದೆ. ಇದರ ಅಂಗವಾಗಿ ಜಾತ್ರಾ ಮಹೋತ್ಸವ ಪ್ರಚಾರದ ರಥಯಾತ್ರೆ ಶಿವಮೊಗ್ಗ ನಗರಕ್ಕೆ ದಿನಾಂಕ ಡಿ.27ರ ಶುಕ್ರವಾರ ಮಧ್ಯಾಹ್ನ 4 ಗಂಟೆಗೆ ಆಗಮಿಸುತ್ತಿದೆ ಎಂದು ಸುತ್ತೂರು ಜಾತ್ರಾ ಮಹೋತ್ಸವದ ಸಂಚಾಲಕರಾದ ಹೊಳಲೂರು ನಿಂಗಪ್ಪ ತಿಳಿಸಿದರು.
ಇಂದು ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಜಾತ್ರಾ ಮಹೋತ್ಸವ ಪ್ರಚಾರದ ರಥಯಾತ್ರೆ ಶಿವಮೊಗ್ಗ ನಗರಕ್ಕೆ ನಾಳೆ 4:30 ಕ್ಕೆ ಆಗಮಿಸಲಿದೆ. ರಥದಲ್ಲಿ ಆದಿ ಜಗದ್ಗುರುಗಳವರ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿರುವುದರಿಂದ ಮಲವಗೊಪ್ಪದ ಶ್ರೀ ಚೆನ್ನಬಸವೇಶ್ವರ ದೇವಸ್ಥಾನದ ಬಳಿ ಮಂಗಳವಾದ್ಯಗಳೊಂದಿಗೆ ಭಕ್ತಿಪೂರ್ವಕವಾಗಿ ಬರಮಾಡಿಕೊಳ್ಳಲಾಗುವುದು ಎಂದರು
ಹಾಗೆಯೇ ಈ ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀ ಮನ್ಮರಾಜ ನಿರಂಜನ ಜಗದ್ಗುರು ಡಾ|| ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳವರು, ಆನಂದಪುರಂನ ಶಿವಮೊಗ್ಗ ಚಿಕ್ಕಮಗಳೂರು ಬಸದ ಕೇಂದ್ರದ ಡಾ. ಶ್ರೀ ಬಸವಮರುಳ ಸಿದ್ದ ಸ್ವಾಮಿಗಳವರು, ಲೋಕಸಭಾ ಸದಸ್ಯರು, ವಿಧಾನಸಭೆ, ವಿಧಾನ ಪರಿಷತ್ ಸದಸ್ಯರುಗಳು, ರಾಜಕೀಯ ಗಣ್ಯವ್ಯಕ್ತಿಗಳು, ಅಧಿಕಾರ ವರ್ಗದವರು, ಶ್ರೀ ಮಠದ ಅಭಿಮಾನಿಗಳು, ಭಕ್ತರು ಪುಷ್ಪಹಾರ ಹಾಕುವುದರ ಮೂಲಕ ಬರಮಾಡಿಕೊಳ್ಳಲಿದ್ದು, ಈ ಕಾರ್ಯಕ್ರಮಕ್ಕೆ ಶ್ರೀ ಮಠದ ಅಭಿಮಾನಿಗಳು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಿದರು.
ನಂತರ ಮಾಜಿ ಶಾಸಕರಾದ ಹೆಚ್ ಎಂ ಚಂದ್ರಶೇಖರ್ ಮಾತನಾಡಿ ಸುತ್ತೂರು ಕ್ಷೇತ್ರದಲ್ಲಿ ಸಾವಿರಾರು ಮಕ್ಕಳಿಗೆ ಉಚಿತ ವಿದ್ಯಾಭ್ಯಾಸ ನೀಡಲಾಗಿದೆ. ಅದೇ ರೀತಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೂ ಕಡುಬಡ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ವಿದ್ಯಾಸಂಸ್ಥೆಯನ್ನು ನಿರ್ಮಾಣ ಮಾಡಿ ವಿದ್ಯಾಭ್ಯಾಸ ಕೊಡಬೇಕು ಎಂದು ಒತ್ತಾಯಿಸಿದರು.
SUMMARY | Suttur Jatra Mahotsava convenor Holalur Ningappa said that the rath yatra will arrive in Shivamogga city on Friday, December 27 at 4 pm.
KEYWORDS | Suttur Jatra Mahotsava, Shivamogga, mysore,