SHIVAMOGGA| MALENADUTODAY NEWS | ಮಲೆನಾಡು ಟುಡೆ Mar 8, 2025
ಶಿವಮೊಗ್ಗಕ್ಕೆ ಕರ್ನಾಟಕ ಉಪ ಲೋಕಾಯುಕ್ತ ನ್ಯಾ.ಕೆ. ಎನ್.ಫಣೀಂದ್ರ ಅವರು ಇದೇ ಮಾರ್ಚ್ 18 ಕ್ಕೆ ಆಗಮಿಸಲಿದ್ದಾರೆ. ಅಲ್ಲದೆ ಮಾರ್ಚ್ 18 ರಿಂದ 21 ರವರೆಗೆ ಶಿವಮೊಗ್ಗದಲ್ಲಿ ಸಾರ್ವಜನಿಕರಿಂದ ಅಹ ವಾಲುಗಳನ್ನು ಸ್ವೀಕರಿಸುವರು. ಅವರ ಕಾರ್ಯಕ್ರಮ ವಿವರ ಹೀಗಿದೆ.
ಮಾ.18ರಂದು ಸಂಜೆ 7.40ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿರುವ ಉಪಲೋಕಾಯುಕ್ತರು ಮಾ.19 ರಂದು ಬೆಳಿಗ್ಗೆ 10 ರಿಂದ ಸಂಜೆ 5.00 ರವರೆಗೆ ನಗರದ ಕುವೆಂಪು ರಂಗ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು.
ಜಿಲ್ಲೆಯಲ್ಲಿ ಯಾವುದೇ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿ, ನೌಕರರಿಂದ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬನೆ ಯಾಗಿದ್ದಲ್ಲಿ ಅಥವಾ ನ್ಯಾಯ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಇನ್ನಾವುದೇ ಅಥವಾ ತರಹದ ದುರಾಡಳಿತದಲ್ಲಿ ತೊಡಗಿ ದ್ದರೆ, ಅದರಿಂದ ತೊಂದರೆ ಗೊಳಗಾದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಅರ್ಜಿ ನಮೂನೆ 1 ಮತ್ತು 2 ರಲ್ಲಿ ಲಿಖಿತವಾಗಿ ದಾಖಲೆ, ಸಾಕ್ಷಾಧಾರಗಳೊಂದಿಗೆ ಸಲ್ಲಿಸಬಹುದಾಗಿದೆ.
ಮಾ.20 ರಂದು ಬೆಳಿಗ್ಗೆ 11 ರಿಂದ 11.30 ರವರೆಗೆ ನಗರದ ಜಿಲ್ಲಾ ಪಂಚಾಯಿತಿಯ ನಜೀರ್ ಸಾಬ್ ಸಭಾಂಗಣದಲ್ಲಿ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ/ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ಪರಿಹರಿಸುವ ಕುರಿತು ದೂರುದಾರರು ಮತ್ತು ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆ ನಡೆಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.