SHIVAMOGGA | MALENADUTODAY NEWS | ಮಲೆನಾಡು ಟುಡೆ Dec 11, 2024
ಶಿವಮೊಗ್ಗ ಜಿಲ್ಲೆಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್‌ವೊಂದನ್ನ ನೀಡಿದೆ. ಶಿವಮೊಗ್ಗದಲ್ಲಿ ಮೆಕ್ಕೆಜೋಳ ಸಂಶೋಧನಾ ಕೇಂದ್ರ ಸ್ಥಾಪಿಸುವುದಾಗಿ ತಿಳಿಸಿದೆ.
ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ರವರು ಕೇಳಿದ ಪ್ರಶ್ನೆಗೆ ಸಂಸತ್ ಕಲಾಪದಲ್ಲಿ ಉತ್ತರಿಸುತ್ತಾ ಕೃಷಿ ಖಾತೆ ರಾಜ್ಯ ಸಚಿವ ಭಗೀರಥ ಚೌಧರಿ ಈ ಮಾತನ್ನ ತಿಳಿಸಿದ್ದಾರೆ.
15ನೇ ಹಣಕಾಸು ಆಯೋಗದ ಅವಧಿಯಲ್ಲಿ ಭಾರತೀಯ ಮೆಕ್ಕೆಜೋಳ ಸಂಶೋಧನಾ ಸಂಸ್ಥೆಯ ಪ್ರಾದೇಶಿಕ ಕೇಂದ್ರವನ್ನು ಶಿವಮೊಗ್ಗಕ್ಕೆ ಸ್ಥಳಾಂತರಿಸಲು ಅನುಮೋದನೆ ನೀಡಲಾಗಿದೆ ಎಂದು ಕೃಷಿ ಖಾತೆ ರಾಜ್ಯ ಸಚಿವ ತಿಳಿಸಿದ್ದಾರೆ.
ಅಲ್ಲದೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಹಾಗೂ ಧಾರವಾಡದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಮೂಲಕ ಮೆಕ್ಕೆಜೋಳ ಸಂಶೋಧನಾ ಚಟುವಟಿಕೆಗಳನ್ನು ನಡೆಸಿ ಪ್ರಚಾರ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
SUMMARY | The central government is planning to set up a regional centre of the Maize Research Institute in Shivamogga. Minister of State for Agriculture Bhagirath Chaudhary
KEY WORDS | central government is planning to set up a regional centre , Maize Research Institute in Shivamogga, Minister of State for Agriculture Bhagirath Chaudhary