ಶಿವಮೊಗ್ಗದಲ್ಲಿ ಫೆ.19 ರಂದು ಛತ್ರಪತಿ ಶಿವಾಜಿ ಮಹಾರಾಜರ 395 ನೇ ಜಯಂತೋತ್ಸವ 

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Feb 15, 2025

ಶಿವಮೊಗ್ಗ | ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್‌ ಸೇರಿದಂತೆ ವಿವಿಧ ಸಂಘಗಳ  ಸಹಯೋಗದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 395 ನೇ ಜಯಂತೋತ್ಸವನ್ನು ಕುವೆಂಪು ರಂಗಮಂದಿರದಲ್ಲಿ ಫೆಬ್ರವರಿ 19 ರಂದು ಬೆಳಿಗ್ಗೆ 11:00 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್‌ ಶಿವಮೊಗ್ಗದ ಉಪಾಧ್ಯಕ್ಷರಾದ ರಮೇಶ್ ಬಾಬು ತಿಳಿಸಿದರು

ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಈ ಕಾರ್ಯಕ್ರಮದ ಉದ್ಘಾಟನೆಯನ್ನು  ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್‌ ಮಧುಬಂಗಾರಪ್ಪ ನೆರವೇರಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಎಸ್‌ ಎನ್‌ ಚನ್ನಬಸಪ್ಪ ವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ತಂಗಡಗಿ ಶಿವರಾಜ್‌ ಸಂಗಪ್ಪ ಆಗಮಿಸಲಿದ್ದಾರೆ ಎಂದರು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ  ಭದ್ರಾವತಿ ಕ್ಷೇತ್ರ  ಶಾಸಕರಾದ ಬಿ. ಕೆ. ಸಂಗಮೇಶ್ವರ, ಸಾಗರದ ಶಾಸಕರಾದ  ಬಿ. ಕೆ. ಗೋಪಾಲಕೃಷ್ಣ ಬೇಳೂರು, ಸಂಸದರಾದ  ಬಿ. ವೈ. ರಾಘವೇಂದ್ರ ಸೇರಿದಂತೆ ಪ್ರಮುಖರು ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಯುವ ವಾಗ್ಮಿಯಾದ ಹಾರಿಕ ಮಂಜುನಾಥ್‌ ರವರು ವಿಶೇಷ ಉಪನ್ಯಾಸವನ್ನು ನೀಡಲಿದ್ದಾರೆ ಎಂದರು.

SUMMARY | The 395th birth anniversary of Chhatrapati Shivaji Maharaj will be held on February 19 at 11:00 am at Kuvempu Rangamandira.

KEYWORDS | Chhatrapati Shivaji, 395th birth anniversary,  Kuvempu Rangamandira,

Leave a Comment