ಶಿವಮೊಗ್ಗದಲ್ಲಿ ಹರತಾಳು ಹಾಲಪ್ಪ ನೇತೃತ್ವದಲ್ಲಿ ರೈತರ ಪ್ರತಿಭಟನೆ | ಕಾರಣವೇನು

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 24, 2025

ಶಿವಮೊಗ್ಗ | ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು ಅವುಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಆಗ್ರಹಿಸಿ ಬಿಜೆಪಿ ರೈತಮೋರ್ಚ ವತಿಯಿಂದ ಇಂದು ನಗರದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದರು.

ಮಾಜಿ ಸಚಿವ ಹರತಾಳು ಹಾಲಪ್ಪ ನೇತೃತ್ವಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ನೆಲದ ಮೇಲೆ ಕುಳಿತು ಅರಣ್ಯಾ ಇಲಾಖೆ ಅಧಿಕಾರಿಗಳ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು ಹಾಗೆಯೇ ಇದುವರೆಗೆ ಆನೆಗಳಿಂದ ಹಾನಿಯಾಗಿರುವ ರೈತರ ಬೆಳೆಗಳಿಗೆ ಸೂಕ್ತ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಬಿ.ಸ್ವಾಮಿರಾವ್, ಅಶೋಕ್ ನಾಯ್ಕ, ಜಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್ ಭಾಗವಹಿಸಿದ್ದರು.

SUMMARY | The BJP Rayth Morcha staged a protest demanding the relocation of wild elephants in Malnad region

KEYWORDS |  BJP, Rayth Morcha, protest, wild elephants,

Leave a Comment