SHIVAMOGGA | MALENADUTODAY NEWS | ಮಲೆನಾಡು ಟುಡೆ | Jan 22, 2025
ಶಿವಮೊಗ್ಗ | ಕಾಡಾನೆಗಳನ್ನು ಸ್ಥಳಾಂತರಿಸುವಂತೆ ಆಗ್ರಹಿಸಿ ಜನವರಿ 24 ರಂದು ನಗರದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಎದುರು ರೈತರಿಂದ ಬೃಹತ್ ಪ್ರತಿಭಟನೆ ಏರ್ಪಡಿಸಲಾಗಿದೆ. ಈ ಕುರಿತು ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ವೀರೇಶ ಅಲುವಳ್ಳಿ ಮಾಹಿತಿ ನೀಡಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ಮಲೆನಾಡಿನ ಭಾಗಗಳಲ್ಲಿ ಆನೆಗಳ ಹಾವಳಿ ಹೆಚ್ಚಾಗಿದ್ದು, ಇದರಿಂದಾಗಿ ರೈತರಿಗೆ ಬಹಳಾ ಸಮಸ್ಯೆ ಉಂಟಾಗುತ್ತಿದೆ. ಅಷ್ಟೇ ಅಲ್ಲದೆ ಹಲವು ಜನ ರೈತರನ್ನು ಕಾಡಾನೆಗಳು ಈಗಾಗಲೇ ಬಲಿ ಪಡೆದಿವೆ. ವಿದ್ಯಾರ್ಥಿಗಳು ನಾಗರೀಕರು ಜೀವಭಯದಲ್ಲಿ ಓಡಾಡುವ ಪರಿಸ್ಥಿತಿ ಎದುರಾಗಿದೆ. ಆದ್ದರಿಂದ ಇದರ ಬಗ್ಗೆ ಅರಣ್ಯ ಇಲಾಖೆಯವರು ಗಮನಹರಿಸಿ ಕಾಡಾನೆಗಳನ್ನು ಸ್ಥಳಾಂತರಿಸಬೇಕೆಂದು ಆಗ್ರಹಿಸಿ ಈ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ ಎಂದರು.
ಈ ಪ್ರತಿಭಟನೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಶಾರದಾ ಪೂರ್ಯಾನಾಯ್ಕ, ವಿಧಾನಪರಿಷತ್ ಸದಸ್ಯರಾದ ಡಾ.ಧನಂಜಯ ಸರ್ಜಿ,ಡಿ.ಎಸ್.ಆರುಣ್,ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ,ಮೇಘರಾಜ್, ರೈತ ಮುಖಂಡರು ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ ಎಂದರು
SUMMARY | On January 24, a massive protest was organised by farmers in front of the office of the chief conservator of forests in the city, demanding the relocation of the wild elephants.
KEYWORDS | farmers, wild elephants, Forests protest,