SHIVAMOGGA | MALENADUTODAY NEWS | ಮಲೆನಾಡು ಟುಡೆ
Sep 25, 2024 ಶಿವಮೊಗ್ಗದಲ್ಲಿ ಇದೇ ಸೆಪ್ಟೆಂಬರ್ 27 ರಿಂದ 29 ವರೆಗೂ ಶೆಟ್ಟರ ಸಂತೆ ನಡೆಯಲಿದೆ. ಆರ್ಯವೈಶ್ಯ ಶ್ರೀರಾಮ ಸಹಕಾರ ಸಂಘದ ಶತಮಾನೋತ್ಸವದ ಭಾಗವಾಗಿ ಸೆ.27 ರಿಂದ 29 ರವರರೆಗೆ ಅಲ್ಲಮ ಪ್ರಭು ಮೈದಾನ ಆವರಣದಲ್ಲಿ ಶೆಟ್ಟರ ಸಂತೆ ಶೀರ್ಷಿಕೆ ಅಡಿಯಲ್ಲಿ ನೂರಕ್ಕೂ ಹೆಚ್ಚು ಸ್ಟಾಲ್ಗಳನ್ನು ತೆರೆಯಲಾಗುತ್ತಿದೆ.
ಈ ಸ್ಟಾಲ್ಗಳಲ್ಲಿ ವೈವಿಧ್ಯಮಯ ತಿನಿಸುಗಳು, ಅಲಂಕಾರಿಕ ಸಾಮಗ್ರಿಗಳು, ಗೃಹೋಪ ಯೋಗಿ ವಸ್ತುಗಳು ಸೇರಿದಂತೆ ವಿವಿಧ ವಸ್ತುಗಳು ಒಂದೆ ಕಡೆಯಲ್ಲಿ ಸಿಗಲಿದೆ.ಈ ಬಗ್ಗೆ ಮಾಹಿತಿ ನೀಡಿದ ಆರ್ಯವೈಶ್ಯ ಶ್ರೀರಾಮ ಸಹಕಾರ ಸಂಘದ ಶತಮಾನೋತ್ಸವ ಸಮಿತಿಯ ಅಧ್ಯಕ್ಷರು ಮತ್ತು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಸೆ.27, 28 ಮತ್ತು 29 ರಂದು ನಗರದ ಅಲ್ಲಮ ಪ್ರಭು ಮೈದಾನದಲ್ಲಿ ಶತಮಾನೋತ್ಸವದ ಸಲುವಾಗಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ವಿಶೇಷವಾಗಿ ಶೆಟ್ಟರ ಸಂತೆಯ ಜೊತೆಗೆ ಪ್ರಸಿದ್ಧ ಗಾಯಕ ವಿಜಯ್ ಪ್ರಕಾಶ್ ಅವರಿಂದ ಸಂಗೀತ ಸಂಜೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ ಡಿ ಎಸ್ ಅರುಣ್, ಸೆ.28 ರಂದು ಬೆಳಗ್ಗೆ 9.00 ಗಂಟೆಗೆ ಶತಮಾನೋತ್ಸವದ ಉದ್ಘಾಟನೆಯನ್ನು ಮೈಸೂರು ರಾಜ ವಂಶಸ್ಥರು ಹಾಗೂ ಮೈಸೂರು-ಕೊಡಗು ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ನೆರೆವೇರಿಸಲಿದ್ದಾರೆ ಅಂತಾ ತಿಳಿಸಿದರು. ಈ ಕಾರ್ಯಕ್ರಮದ ದಿವ್ಯ ಸಾನಿದ್ಯೌನ್ನು ಬೆಂಗಳೂರು ವಾಸವಿ ವಿದ್ಯಾ ಪೀಠದ ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ವಹಿಸಲಿದ್ದಾರೆ.