SHIVAMOGGA | MALENADUTODAY NEWS | ಮಲೆನಾಡು ಟುಡೆ | Dec 14, 2024
ಶಿವಮೊಗ್ಗ| ಶಿವಮೊಗ್ಗದ ಇಂಪೀರಿಯಲ್ ಪಿಯು ಕಾಲೇಜಿನ ವಿದ್ಯಾರ್ಥಿಯಾದ ಮೊಹಮದ್ ಬಿಲಾಲ್ ಕರಾಟೆ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕವನ್ನು ಗೆದ್ದಿದ್ದಾರೆ. ಡಿಸೆಂಬರ್ 19 ರಿಂದ 26 ವರೆಗೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆಯಲಿರುವ ಎಸ್‌ಸಿಎಫ್‌ಐ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿದ್ದಾರೆ. ಈ ಕುರಿತು ಅಬ್ದುಲ್ ಗನಿ ಮಾಹಿತಿ ನೀಡಿದರು.
ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು ನವೆಂಬರ್ 13ರಂದು ದಾವಣಗೆರೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ 19 ವರ್ಷದ ವಯೋಮಿತಿ ಒಳಗಿನ ಬಾಲಕ ಬಾಲಕಿಯರ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿ ಆಯೋಜಿಸಲಾಗಿತ್ತು. ಈ ಕರಾಟೆ ಕ್ರೀಡಾ ಕೂಟದಲ್ಲಿ ಶಿವಮೊಗ್ಗ ಜಿಲ್ಲಾ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಮುಕೀಬ್ ಅಹಮದ್ ಧರ್ವೇಷ್ ಮತ್ತು ಜಗುನು ದಂಪತಿಗಳ ಪುತ್ರ ಮಹಮದ್ ಬಿಲಾಲ್ 62 ಕೆಜಿ ಕರಾಟೆ ಪಂದ್ಯದಲ್ಲಿ ಶಿವಮೊಗ್ಗ ಜಿಲ್ಲೆಯನ್ನೂ ಪ್ರತಿನಿಧಿಸಿದ್ದರು. ಆ ಪಂದ್ಯದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದ್ದರು. ಇದೀಗ ಡಿಸೆಂಬರ್ 19 ರಿಂದ 26 ವರೆಗೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆಯಲಿರುವ ಎಸ್,ಜಿ,ಎಫ್,ಐ, ರಾಷ್ಟ್ರಮಟ್ಟದ ಕರಾಟೆ ಪಂದ್ಯದಲ್ಲಿ ಕರ್ನಾಟಕವನ್ನ ಪ್ರತಿನಿಧಿಸಲಿದ್ದಾರೆ. ಇದು ನಮ್ಮ ಶಿವಮೊಗ್ಗಕ್ಕೆ ಹೆಮ್ಮೆಯ ವಿಷಯ ಕಳೆದ ವರ್ಷ ಸಹ ಶಾಲಾ ಶಿಕ್ಷಣ ಇಲಾಖೆಯ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಮೊಹಮದ್ ಬಿಲಾಲ್ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದರು ಹಾಗೆ ದೆಹಲಿಯಲ್ಲಿ ಭಾಗವಹಿಸಿದ್ದರು. ಇದೀಗ ಎರಡನೇ ಬಾರಿ ಬಿಲಾಲ್ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವುದು ಸಂತಸ ತಂದಿದೆ ಎಂದರು.
ಇಂಪೀರಿಯಲ್ ಪಿಯು ಕಾಲೇಜಿನ ಪ್ರಿನ್ಸಿಪಾಲ್ ಖಲಿಮುಲ್ಲ ಖಾನ್ ಮಾತನಾಡಿ ಮಹಮದ್ ಬಿಲಾಲ್ ನಮ್ಮ ಕಾಲೇಜಿನಲ್ಲಿ ಪ್ರಥಮ ವರ್ಷದ ಕಾಮರ್ಸ್ ಓದುತ್ತಿದ್ದಾರೆ ಅವರ ಈ ಸಾಧನೆ ನಮ್ಮ ಕಾಲೇಜಿಗೆ ಹಾಗೂ ಜಿಲ್ಲೆಗೆ ಕೀರ್ತಿಯನ್ನು ತಂದಿದೆ ಅವರ ಮುಂದಿನ ಭವಿಷ್ಯಕ್ಕೆ ಒಳ್ಳೆಯದಾಗಲಿ ಎಂದರು
ನನ್ನ ತಂದೆಯೇ ನನಗೆ ಕರಾಟೆ ಗುರು | ಮೊಹಮದ್ ಬಿಲಾಲ್
ನಾನು ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆಯುತ್ತಿರುವ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿದ್ದೇನೆ. ಅಲ್ಲಿ ನಾನು ಮೆಡಲ್ ಗೆದ್ದುಕೊಂಡು ಬರಲು ನಿಮ್ಮೆಲ್ಲರ ಪ್ರೋತ್ಸಾಹ ಬಹಳ ಮುಖ್ಯವಾಗುತ್ತದೆ. ನನಗೆ ಕರಾಟೆ ಕಲಿಸಿದ ಗುರು ನಮ್ಮ ತಂದೆ ಮುಜೀಬ್ ಅಹಮದ್ ದರ್ಮೇಶ್ ನಾನು 2012 ರಿಂದ ಕರಾಟೆಯನ್ನು ಕಲಿಯುತ್ತಾ ಬಂದಿದ್ದೇನೆ. ಇದೀಗ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು ನನಗೆ ಸಂತೋಷ ತಂದಿದೆ ಎಂದರು.
SUMMARY | Mohammed Bilal, a student of Imperial PU College, Shivamogga, won the gold medal by finishing first in the state in the karate competition.
KEYWORDS | Mohammed Bilal, state karate competition, Imperial PU College, shivamogga,