SHIVAMOGGA | MALENADUTODAY NEWS | ಮಲೆನಾಡು ಟುಡೆ | Jan 20, 2025
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವವನ್ನು ಜನವರಿ 22 ರಂದು ಇರುವಕ್ಕಿಯಲ್ಲಿರುವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಡಾ. ಆರ್ ಸಿ ಜಗದೀಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕಾರ್ಯಕ್ರಮಕ್ಕೆ ಕರ್ನಾಟಕ ಸರ್ಕಾರದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್‌ಚಂದ್ ಗೆಹ್ಲೋಟ್ ಅವರು ಈ ಘಟಿಕೋತ್ಸವಕ್ಕೆ ಚಾಲನೆ ನೀಡುತ್ತಾರೆ. ಹಾಗೂ ಪದವಿ ಸಂಪೂರ್ಣಗೊಳಿಸಿದವರಿಗೆ ಪದವಿ ಪ್ರದಾನ ಮಾಡಲಿದ್ದಾರೆ ಎಂದರು. ಹಾಗೆಯೇ ಈ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಕೃಷಿ ಸಚಿವರು ಹಾಗೂ ವಿಶ್ವವಿದ್ಯಾಲಯ ಸಹ ಕುಲಾಧಿಪತಿಗಳಾಗಿರುವ ಎನ್ ಚೆಲುವರಾಯಸ್ವಾಮಿ ಭಾಗವಹಿಸುವರು. ಪ್ರೊ. ಎಲ್ .ಎಸ್. ಶಶಿಧರ, ನಿರ್ದೇಶಕರು, ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ ಮತ್ತು ಟಾಟಾ ಮೂಲಭೂತ ಸಂಶೋಧನಾ ಸಂಸ್ಥೆ, ಬೆಂಗಳೂರು ಇವರು ಒಂಬತ್ತನೇ ಘಟಿಕೋತ್ಸವ ಭಾಷಣವನ್ನು ಮಾಡಲಿದ್ದಾರೆ ಎಂದರು.

ಹಾಗೆಯೇ ಪದಕ ಹಾಗೂ ಪಿಹೆಚ್ ಡಿ ಪಡೆದವರ ಬಗ್ಗೆ ಮಾಹಿತಿ ನೀಡಿದ ಅವರು ಒಂಬತ್ತನೇ ಘಟಿಕೋತ್ಸವದಲ್ಲಿ ಒಟ್ಟು 994 ಅಭ್ಯರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಗುತ್ತಿದೆ. 793 ವಿದ್ಯಾರ್ಥಿಗಳು ಕೃಷಿ, ತೋಟಗಾರಿಕೆ, ಅರಣ್ಯ ವಿಭಾಗಗಳಲ್ಲಿ ಪದವಿ ಹಾಗೂ 176 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಹಾಗೂ 25 ವಿದ್ಯಾರ್ಥಿಗಳು ಪಿ.ಹೆಚ್.ಡಿ. ಪದವಿ ಪಡೆಯುತ್ತಿದ್ದಾರೆ. ಇವರಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿದ 17 ಪದವಿ ವಿದ್ಯಾರ್ಥಿಗಳು ಚಿನ್ನದ ಪದಕಕ್ಕೆ ಬಾಜನರಾಗಿದ್ದಾರೆ. ಅವರಿಗೆ ಒಟ್ಟು 31 ಚಿನ್ನದ ಪದಕಗಳನ್ನು ನೀಡಲಾಗುವುದು. 28 ಎಂ.ಎಸ್ಸಿ. ವಿದ್ಯಾರ್ಥಿಗಳು ಚಿನ್ನದ ಪದಕಕ್ಕೆ ಬಾಜನರಾಗಿದ್ದಾರೆ. ಅವರಿಗೆ ಒಟ್ಟು 33 ಚಿನ್ನದ ಪದಕಗಳನ್ನು ನೀಡಲಾಗುವುದು. 10 ಪಿ.ಹೆಚ್.ಡಿ. ವಿದ್ಯಾರ್ಥಿಗಳು ಚಿನ್ನದ ಪದಕಕ್ಕೆ ಬಾಜನರಾಗಿದ್ದಾರೆ. ಅವರಿಗೆ ಒಟ್ಟು 12 ಚಿನ್ನದ ಪದಕಗಳನ್ನು ನೀಡಲಾಗುವುದು ಎಂದರು.
ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪರಿಗೆ ಡಾಕ್ಟರೇಟ್
ಕಾಗೋಡು ತಿಮ್ಮಪ್ಪನವರು ಕೃಷಿಕರು, ಕೃಷಿ ವ್ಯವಸ್ಥೆಗೆ ಬೆಂಬಲವಾಗಿದ್ದು ಜನೋಪಯೋಗಿ ಕಾರ್ಯವನ್ನೇ ರಾಜಕಾರಣ ಎಂದೆನಿಸಿದವರು ಹಾಗೂ ಸಮಾಜವಾಧಿ ಚಿಂತಕರು. ಗ್ರಾಮೀಣ ಬದುಕನ್ನು ಹಸನಾಗಿಸುವ ನಿಟ್ಟಿನಲ್ಲಿ ಇವರ ಪರಿಶ್ರಮ ಇವರನ್ನು ಕರ್ನಾಟಕ ರಾಜಕಾರಣದಲ್ಲಿ ಅಪರೂಪದ ವ್ಯಕ್ತಿಯನ್ನಾಗಿಸಿದೆ. ಇವರು ಕೃಷಿ ವ್ಯವಸ್ಥೆ ಗ್ರಾಮೀಣ ಬದುಕನ್ನು ಹಸನು ಮಾಡಲು ಶ್ರಮಿಸಿದ ಸೇವೆ ಹಾಗೂ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವನ್ನು ಸ್ಥಾಪಿಸಿ ‘ಅಭಿವೃದ್ಧಿಪಡಿಸುವಲ್ಲಿ ಮಾಡಿದ ಅವರ ಸೇವೆ ಸ್ಮರಿಸಿ ಗೌರವಿಸಲು ಅವರಿಗೆ ಈ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ ಎಂದರು.
SUMMARY | The 9th convocation of Keladi Shivappa Nayaka University of Agricultural and Horticultural Sciences will be held on January 22 at Iruvakki
KEYWORDS | Keladi Shivappa Nayaka, University, convocation,