SHIVAMOGGA | MALENADUTODAY NEWS | ಮಲೆನಾಡು ಟುಡೆ Feb 10, 2025
ಶಿವಮೊಗ್ಗ : ನಗರದ ಖಾಸಗಿ ಬಸ್ ನಿಲ್ದಾಣದ ಬಳಿಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಇಲ್ಲಿನ ಬಸ್ ನಿಲ್ದಾಣದ ಬಳಿಯಲ್ಲಿ ಪ್ರಜ್ಞೆತಪ್ಪಿ ಬಿದ್ದಂತ ಸ್ಥಿತಿಯಲ್ಲಿ ಕಂಡು ಬಂದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದ ಸಂದರ್ಭದಲ್ಲಿ ಆತ ಮೃತಪಟ್ಟಿರುವುದನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ವೈದ್ಯರು ದೃಢಪಡಿಸಿದ್ದರು. ಇದೀಗ ಮೃತರ ಗುರುತು ಪತ್ತೆಗಾಗಿ ಪೊಲೀಸರು ಪ್ರಕಟಣೆಯನ್ನು ನೀಡಿದ್ದು, ಅವರ ಸುಳಿವು ಸಿಕ್ಕಲ್ಲಿ ಮಾಹಿತಿ ಒದಗಿಸುವಂತೆ ಮನವಿ ಮಾಡಿದ್ದಾರೆ.
ವಾರಸ್ಸುದಾರರ ಪತ್ತೆಗೆ ಮನವಿ
ಕಳೆದ ಫೆಬ್ರವರಿ 07 ರಂದು ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದ ಹತ್ತಿರ, ಪೊಲೀಸರ ಪರಿಶೀಲನೆ ವೇಳೆ 45-50 ವರ್ಷದ ವ್ಯಕ್ತಿಯೊಬ್ಬರು ಪ್ರಜ್ಞೆ ಇಲ್ಲದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅವರನ್ನು ಸಾರ್ವಜನಿಕರ ಸಹಾಯದಿಂದ ಆಂಬ್ಯುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಿದ್ದು, ವೈದ್ಯರು ಪರೀಕ್ಷಿಸಿ ಅವರು ಮೃತಪಟ್ಟಿರುವುದಾಗಿ ದೃಢಪಡಿಸಿರುತ್ತಾರೆ. ಈ ವ್ಯಕ್ತಿಯ ಹೆಸರು, ವಿಳಾಸ, ವಾರಸ್ಸುದಾರರ ಬಗ್ಗೆ ಯಾವುದೇ ಸುಳಿವು ಇರುವುದಿಲ್ಲ.
ಮೃತರ ಗುರುತು
ಮೃತನ ಚಹರೆ 5.5 ಅಡಿ ಉದ್ದ, ದುಂಡು ಮುಖ, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದು, ಬಲಗೈ ಒಳಭಾಗದಲ್ಲಿ ನಿತು ಎಂಬ ಹಚ್ಚೆ ಗುರುತು ಇರುತ್ತದೆ. ಮೈಮೇಲೆ ಆಕಾಶ ನೀಲಿ ಬಣ್ಣದ ಅರ್ಧ ತೋಳಿನ ಶರ್ಟ್, ಬೂದು ಬಣ್ಣದ ಜಾಕೀಟ್, ತೆಳು ಕಂದು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ಈ ಮೃತ ವ್ಯಕ್ತಿಯ ವಾರಸ್ಸುದಾರರ ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ. : 08182-261414 / 9916882544 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ
SUMMARY | police announcement to identify unidentified body found in private bus stand
KEY WORDS | unidentified body found in private bus stand