SHIVAMOGGA | MALENADUTODAY NEWS | ಮಲೆನಾಡು ಟುಡೆ Jan 21, 2025
ಶಿವಮೊಗ್ಗವೂ ಸೇರಿದಂತೆ ಹಲವೆಡೆಗಳಿಂದ ಸಂಚರಿಸುವ ಟ್ರೈನ್‌ಗಳ ಓಡಾಟದಲ್ಲಿ ನಿರ್ದಿಷ್ಟ ದಿನ ನೈರುತ್ಯ ರೈಲ್ವೆ ವಲಯ ಕೆಲವೊಂದು ಬದಲಾವಣೆ ಮಾಡಿದೆ. ಅದರ ವಿವರ ಹೀಗಿದೆ.
ರೈಲುಗಳ ಭಾಗಶಃ ರದ್ದು ಮತ್ತು ಮರುವೇಳಾಪಟ್ಟಿ
ಕಡೂರು ಮತ್ತು ಬೀರೂರು ನಿಲ್ದಾಣದ ಯಾರ್ಡ್ ಗಳಲ್ಲಿ ಸುರಕ್ಷತೆಗೆ ಸಂಬಂಧಿಸಿದ ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ, ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದು, ಮರು ವೇಳಾಪಟ್ಟಿ ನಿಗದಿ/ನಿಯಂತ್ರಿಸಲಾಗುತ್ತಿದೆ. ಅವುಗಳ ಮಾಹಿತಿ ಈ ಕೆಳಗಿನಂತಿವೆ:
ರೈಲುಗಳ ಭಾಗಶಃ ರದ್ದು:
1. ಜನವರಿ 25 ಮತ್ತು ಫೆಬ್ರವರಿ 1, 2025 ರಂದು ರೈಲು ಸಂಖ್ಯೆ 56271 ಶಿವಮೊಗ್ಗ ಟೌನ್-ಚಿಕ್ಕಮಗಳೂರು ಡೈಲಿ ಪ್ಯಾಸೆಂಜರ್ ರೈಲು ಬೀರೂರು ಮತ್ತು ಚಿಕ್ಕಮಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ. ಈ ರೈಲಿನ ಸೇವೆ ಬೀರೂರಿನಲ್ಲಿ ಕೊನೆಗೊಳ್ಳಲಿದೆ.
ರೈಲುಗಳ ಮರು ವೇಳಾಪಟ್ಟಿ/ನಿಯಂತ್ರಣ:


1. ಜನವರಿ 21 ಮತ್ತು ಫೆಬ್ರವರಿ 4 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 16213 ಅರಸೀಕೆರೆ-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಎಕ್ಸ್ ಪ್ರೆಸ್ ರೈಲು ಅರಸೀಕೆರೆಯಿಂದ 75 ನಿಮಿಷ ತಡವಾಗಿ ಹೊರಡಲಿದೆ.
2. ಜನವರಿ 21 ಮತ್ತು ಫೆಬ್ರವರಿ 4 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 56906 ಎಸ್ಎಸ್ಎಸ್ ಹುಬ್ಬಳ್ಳಿ-ಸೋಲಾಪುರ ಡೈಲಿ ಪ್ಯಾಸೆಂಜರ್ ರೈಲು ಹುಬ್ಬಳ್ಳಿಯಿಂದ 75 ನಿಮಿಷ ತಡವಾಗಿ ಹೊರಡಲಿದೆ.
3. ಜನವರಿ 25 ಮತ್ತು ಫೆಬ್ರವರಿ 1 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 16214 ಎಸ್ಎಸ್ಎಸ್ ಹುಬ್ಬಳ್ಳಿ-ಅರಸೀಕೆರೆ ಡೈಲಿ ಎಕ್ಸ್ ಪ್ರೆಸ್ ರೈಲು ಹುಬ್ಬಳ್ಳಿಯಿಂದ 75 ನಿಮಿಷ ತಡವಾಗಿ ಹೊರಡಲಿದೆ. ಮತ್ತು ಈ ರೈಲು ಮಾರ್ಗ ಮಧ್ಯ 60 ನಿಮಿಷ ನಿಯಂತ್ರಣವಾಗಲಿದೆ.
SUMMARY | Kadur and Birur station yards, Shivamogga Town-Chikkamagaluru train service to be changed
KEY WORDS | Kadur and Birur station yards, Shivamogga Town-Chikmagalur train