SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 17, 2024
ಮಹತ್ವದ ಪ್ರಕರಣದಲ್ಲಿ ಪರಿಹಾರ ನೀಡಲು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯ ಪಿಠೋಪಕರಣಗಳನ್ನ ಜಪ್ತಿ ಮಾಡುವಂತೆ ಜಿಲ್ಲಾ ಕೋರ್ಟ್ ಆದೇಶ ಮಾಡಿದೆ.
ಏನಿದು ಪ್ರಕರಣ
ರಸ್ತೆ ಅಭಿವೃದ್ಧಿಗೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದಿಂದ ಭೂಮಿ ಕಳೆದುಕೊಂಡು ಪರಿಹಾರ ನೀಡುವಲ್ಲಿ ಅನ್ಯಾಯವಾಗಿದೆ ಎಂದು ವ್ಯಕ್ತಿಯೊಬ್ಬರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಸಂಬಂಧ ಡಿಸಿ ಕಚೇರಿಯ ಪೀಠೋಪಕರಣ ಗಳನ್ನು ಜಪ್ತಿ ಮಾಡುವಂತೆ ಜಿಲ್ಲಾ ನ್ಯಾಯಾಲಯದ ಅಮೇಲ್ದಾರಿ ಸಂಖ್ಯೆ 16/2024ರಲ್ಲಿ ಆದೇಶ ಹೊರಡಿಸಲಾಗಿದೆ.
ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದ ಅಗಡಿ ಆಶೋಕ್ ಎನ್ನುವವರಿಗೆ ಸೇರಿದ ನಿವೇಶನದ ಸ್ವಲ್ಪ ಭಾಗವನ್ನು ರಾಜ್ಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ (ಕೆ-ಶಿಪ್) 2011 ರಲ್ಲಿ ವಶಪಡಿಸಿಕೊಂಡಿತ್ತು.
ನಿವೇಶನಕ್ಕೆ ಸಂಬಂಧಿಸಿದಂತೆ ಕಾನೂನು ಬದ್ಧವಾಗಿ ಪರಿಹಾರ ನೀಡಿಲ್ಲ ಎಂದು ನಿವೇಶನದ ಮಾಲೀಕರು ನ್ಯಾಯಾಲಯದ ಮೆಟ್ಟಿಲೇರಿದ್ದರು.
ಹೈಕೋರ್ಟ್ ನಿರ್ದೇಶನದಂತೆ ಪಿರ್ಯಾದಿದಾರರಾದ ಅಗಡಿ ಅಶೋಕ್ ಅವರಿಗೆ ಮೂರು ತಿಂಗಳೊಳಗೆ 3.93 ಕೋಟಿ ರು. ಸೇರಿದಂತೆ ಒಟ್ಟು 4.44 ಕೋಟಿ ರು. ಪರಿಹಾರ ನೀಡುವಂತೆ ಡಿಸಿ ಕಚೇರಿಗೆ ಸೂಚಿಸಲಾಗಿತ್ತು.
ವಿಳಂಭವಾದ ಹಿನ್ನೆಲೆ ಜಿಲ್ಲಾ ನ್ಯಾಯಾಲಯವು ಡಿಸಿ ಕಚೇರಿಯ ಪೀಠೋಪಕರಣ ಜಪ್ತಿ ಮಾಡುವಂತೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಪಿರ್ಯಾದಿದಾರ ಪರವಾಗಿ ಸೊರಬ ಪಟ್ಟಣದ ವಕೀಲರಾದ ಪಿ.ವಿ. ಖರೆ ಹಾಗೂ ದಿನಕರ್ಭಟ್ ಭಾವೆ ವಾದ ಮಂಡಿಸಿದ್ದರು.
naga yakshi mata | ಸಾಮಾನ್ಯ ಸಾಧುವಾಗಿದ್ದು ಹೇಗೆ? ಶಿವಮೊಗ್ಗದ ನಿಗೂಢ ಅವಧೂತ ! JP ಬರೆಯುತ್ತಾರೆ
ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ