SHIVAMOGGA | MALENADUTODAY NEWS | ಮಲೆನಾಡು ಟುಡೆ | Jan 3, 2025
ಶಿವಮೊಗ್ಗ | ಶಿವಮೊಗ್ಗ ಜಿಲ್ಲಾ ಸರ್ಕಾರಿ ನಿವೃತ್ತ ನೌಕಾರರ ಸಂಘದ ವತಿಯಿಂದ 2022-23ನೇ ಸಾಲಿನ ಸರ್ವ ಸದಸ್ಯರ 55 ನೆ ವಾರ್ಷಿಕ ಮಹಾಸಭೆ ಹಿರಿಯ ಸದಸ್ಯರಿಗೆ ಸನ್ಮಾನ ಹಾಗೂ ಅಭಿನಂದನಾ ಸಮಾರಂಭವನ್ನು ಜನವರಿ 6 ರಂದು ಹಮ್ಮಿಕೊಂಡಿದ್ದೇವೆ. ಈ ಕಾರ್ಯಕ್ರಮ ಜಿಲ್ಲಾ ಸರ್ಕಾರಿ ನೌಕರರ ಭವನ ಶಿವಮೊಗ್ಗದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಷಣ್ಮುಖಪ್ಪ ತಿಳಿಸಿದರು.
ಇಂದು ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು ಪ್ರತಿವರ್ಷದಂತೆ ಈ ವರ್ಷವೂ ಸಹ ನಮ್ಮ ಸಂಸ್ಥೆಯ ವತಿಯಿಂದ 75 ವರ್ಷ ತುಂಬಿದ ಸದಸ್ಯರಿಗೆ ಸನ್ಮಾನ ಹಾಗೂ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿದ್ದೇವೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಿಕ್ಷಣ ಸಚಿವರಾದ ಮಧುಬಂಗಾರಪ್ಪನವರು ಮಾಡಲಿದ್ದಾರೆ. ಹಾಗೆಯೇ ಹಿರಿಯ ಸದಸ್ಯರಿಗೆ ಸನ್ಮಾನವನ್ನು ಲೋಕಸಭಾ ಸದಸ್ಯರಾದ ಬಿ ವೈ ರಾಘವೇಂದ್ರ , ಶಿವಮೊಗ್ಗ ವಿಧಾನಸಭಾ ನಗರ ಕ್ಷೇತ್ರದ ಶಾಸಕರಾದ ಎಸ್ಎನ್ ಚೆನ್ನಬಸಪ್ಪ ,ವಿಧಾನ ಪರಿಷತ್ ಸದಸ್ಯ ಡಾ ಧನಂಜಯ್ ಸರ್ಜಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ಇವರುಗಳು ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟಿ ಎ ಶರಣಪ್ಪ ಜಿಲ್ಲಾ ಸರ್ಕಾರಿ ನಿವೃತ್ತ ಸಂಘದ ಅಧ್ಯಕ್ಷರು ವಹಿಸಲಿದ್ದಾರೆ ಎಂದರು.
SUMMARY | Shimoga District Government Retired Employees Association has organised the 55th Annual General Meeting (AGM) of all members for the year 2022-23 on January 6
KEYWORDS | Shimoga, Annual General Meeting, January, kannadanews,