ಶಿವಮೊಗ್ಗ ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ಅವ್ಯಹಾರ | ಸಮಗ್ರ ತನಿಖೆಗೆ  ಎಂ. ಗುರುಮೂರ್ತಿ‌ ಆಗ್ರಹ 

131

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 3, 2025

ಶಿವಮೊಗ್ಗ|  ಶಿವಮೊಗ್ಗ ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ರಾಜ್ಯ ಸಂಚಾಲಕ ಎಂ. ಗುರುಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ಇಂದು ಆಗ್ರಹಿಸಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಅಬಕಾರಿ ಇಲಾಖೆಯಲ್ಲಿ ಅನೇಕ ಅವ್ಯವಹಾರಗಳು ನಡೆಯುತ್ತಿವೆ. ಒಂದು ಲೈಸೆನ್ಸ್ ಪಡೆಯಲು 50ರಿಂದ 60 ಲಕ್ಷ ರೂ. ಲಂಚ ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರುಗಳಿವೆ. ಜೊತೆಗೆ ಸರ್ಕಾರದ ಯಾವುದೇ ನಿಯಮಗಳನ್ನು ಪಾಲಿಸದೇ ಅಧಿಕಾರಿಗಳು ಲೈಸೆನ್ಸ್ ನೀಡುತ್ತಾರೆ. ಒಂದು ಅಂದಾಜಿನ ಪ್ರಕಾರ ಈ ರೀತಿಯ ಲೈಸೆನ್ಸ್ ನಿಂದ ಜಿಲ್ಲೆಯಲ್ಲಿ ಸುಮಾರು 20 ಕೋಟಿ. ರೂ. ಗೂ ಹೆಚ್ಚು ಅವ್ಯವಹಾರವಾಗಿದೆ ಎಂದು ತಿಳಿದು ಬಂದಿದೆ ಎಂದರು.

ತೀರ್ಥಹಳ್ಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಅಂಗಡಿ, ಹೊಸನಗರ ತಾಲೂಕಿನ ಕೋಣಂದೂರು ಮುಖ್ಯ ರಸ್ತೆಯ ಮಸೀದಿ ಮುಂದೆಯೇ ಇರುವ ಅಂಗಡಿ, ಹೊಳೆಬೆನವಳ್ಳಿ, ಶಿವಮೊಗ್ಗದ ಕೆಲವು ಕಡೆ, ಸಾಗರದಲ್ಲಿ, ಹೀಗೆ ಇಡೀ ಜಿಲ್ಲೆಯಲ್ಲಿ ಮದ್ಯದ ಅಂಗಡಿಗಳನ್ನು ತೆರೆಯಲಾಗಿದೆ. ಇವೆಲ್ಲವೂ ನಿಯಮಬಾಹಿರವಾಗಿವೆ ಎಂದು ಆರೋಪಿಸಿದರು. 

ಆದ್ದರಿಂದ ಹಲವಾರು ವರ್ಷಗಳಿಂದ ಶಿವಮೊಗ್ಗ ಕಚೇರಿಯಲ್ಲೇ ಠಿಕಾಣಿ ಹೂಡಿರುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಮತ್ತು ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

SUMMARY | A thorough probe has been ordered into the alleged irregularities in the excise department of Shivamogga district. Gurumurthy demanded

KEYWORDS | Shivamogga, Gurumurthy, excise department,  

Share This Article