SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 15, 2024 Shimoga traffic police
ಶಿವಮೊಗ್ಗ ಟ್ರಾಫಿಕ್ ಪೊಲೀಸರು (Shivamogga Traffic Police) ಅಪ್ರಾಪ್ತನ ಕೈಗೆ ಬೈಕ್ ಓಡಿಸಲು ಅವಕಾಶ ಮಾಡಿಕೊಟ್ಟ ತಂದೆಯ ವಿರುದ್ಧ ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು, ಈ ಸಂಬಂಧ ಕೋರ್ಟ್ ಅಪ್ರಾಪ್ತನ ತಂದೆ 25 ಸಾವಿರ ರೂಪಾಯಿ ದಂಡ ವಿಧಿಸಿದೆ.
ಶಿವಮೊಗ್ಗ ಟ್ರಾಫಿಕ್ ಪೊಲೀಸರು
ಶಿವಮೊಗ್ಗ ನಗರದ ಎಸ್.ಎನ್.ಸರ್ಕಲ್‌ನಲ್ಲಿ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್, ಸಿಬ್ಬಂದಿ ಸುರೇಶ್ ಮತ್ತು ದಿನೇಶ್ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭವದು. ಅಲ್ಲಿಗೆ ಅಪ್ರಾಪ್ತ ಬಾಲಕನೊಬ್ಬ ಬೈಕ್ ಓಡಿಸಿಕೊಂಡು ಬಂದಿದ್ದಾನೆ. ಆತನನ್ನ ಪೊಲೀಸರು ತಡೆದಿದ್ದಾರೆ. ಆ ಬಳಿಕ ದಾಖಲೆಗಳನ್ನ ಪರಿಶೀಲನೆ ಮಾಡಿದ ಪೊಲೀಸರಿಗೆ ಆತ ಅಪ್ರಾಪ್ತ ಎಂದು ಗೊತ್ತಾಗಿದೆ. ಹಾಗಾಗಿ ಆತನಿಗೆ ಬೈಕ್ ಓಡಿಸಲು ನೀಡಿದ ತಂದೆಯ ವಿರುದ್ದ ಕೇಸ್ ದಾಖಲಿಸಿ, ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಈ ಸಂಬಂಧ ವಿಚಾರಣೆ ನಡೆಸಿದ 4ನೇ ಹೆಚ್ಚುವರಿ ಸಿ.ಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ವಾಹನದ ಮಾಲೀಕನಿಗೆ 25 ಸಾವಿರ ರೂಪಾಯಿ ದಂಡ ಹಾಕಿದೆ.
naga yakshi mata | ಸಾಮಾನ್ಯ ಸಾಧುವಾಗಿದ್ದು ಹೇಗೆ? ಶಿವಮೊಗ್ಗದ ನಿಗೂಢ ಅವಧೂತ ! JP ಬರೆಯುತ್ತಾರೆ
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ