SHIVAMOGGA | MALENADUTODAY NEWS | ಮಲೆನಾಡು ಟುಡೆ Nov 9, 2024
ಶಿವಮೊಗ್ಗ | ತಾಲ್ಲೂಕಿನ ಹೊಳಲೂರು ಗ್ರಾಮದಲ್ಲಿರುವ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಮಾರ್ಗದಿಂದ ಸರಬರಾಜಾಗುವ ಎಫ್-7, ಎಫ್-8 ಮತ್ತು ಎಫ್-10 ಮಾರ್ಗಗಳಲ್ಲಿ ಲಿಂಕ್ ಲೈನ್ ಮಾರ್ಗ ರಚಿಸುವ ಕಾಮಗಾರಿಯನ್ನು ಮೆಸ್ಕಾಂ ಹಮ್ಮಿಕೊಂಡಿದೆ.
ಈ ಹಿನ್ನೆಲೆಯಲ್ಲಿ ಹಾಡೋನಹಳ್ಳಿ, ಹಳೆ/ಹೊಸ ಮಡಿಕೆಚೀಲೂರು ಮತ್ತು ಬಿ.ಕೆ.ತಾವರೆ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಲ್ಕು ದಿನಗಳ ಕಾಲ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ನವೆಂಬರ್ 12, 13, 14 ಮತ್ತು 15 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ಕೋರಿದೆ.
SUMMARY | Power cut in Hadonahalli, Old/New Madikecheylur, B.K. Taware villages

KEYWORDS | Power cut in Hadonahalli, Old/New Madikecheylur, B.K. Taware villages