SHIVAMOGGA | MALENADUTODAY NEWS | ಮಲೆನಾಡು ಟುಡೆ Dec 17, 2024
ಶಿವಮೊಗ್ಗ ಹಾಗೂ ತೀರ್ಥಹಳ್ಳಿ ತಾಲ್ಲೂಕುನಲ್ಲಿ ನಾಳೆ ಹಾಗೂ ನಾಡಿದ್ದು ಎರಡು ದಿನಗಳ ಕಾಲ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಇರೋದಿಲ್ಲ. ಈ ಸಂಬಂಧ ಮೆಸ್ಕಾಂ ಶಿವಮೊಗ್ಗ ವಿಭಾಗ ಪ್ರಕಟಣೆಯನ್ನ ನೀಡಿದೆ.
ಕೋಣಂದೂರು ಸುತ್ತಮುತ್ತ ಕರೆಂಟ್ ಕಟ್
ಕೋಣಂದೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಲೈನ್ ನಿರ್ವಹಣಾ ಕಾಮಗಾರಿ ಇರುವುದರಿಂದ ನಾಳೆ ಅಂದರೆ ಡಿಸೆಂಬರ್ 18ರಂದು ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ವಿದ್ಯುತ್ ವಿತರಣೆಯಲ್ಲಿ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಹುಂಚದಕಟ್ಟೆ ಹಾಗೂ ಹಾದಿಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಂ.ಜಿ.ರಸ್ತೆ , ಎಂ.ಕೆ.ರಸ್ತೆ, ಮೇಲ್ ಪೇಟೆ, ಬನಶಂಕರಿ ಗುಡ್ಡ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಣ್ಣಿಕೊಪ್ಪ, ಮಸೀದಿ ಕೇರಿ, ಇಂದಿರಾನಗರ, ಮಾಂಗಲ್ಯ ಮಂದಿರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ ಎಂದು ತಿಳಿಸಲಾಗಿದೆ.
ಡಿ.19ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ ಎಂ.ಆರ್.ಎಸ್.220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ನಾಡಿದ್ದು ಡಿಸೆಂಬರ್ 19 ರಂದು ಬೆಳಗ್ಗೆ 9.30 ರಿಂದ ಸಂಜೆ 6.00ರವರೆಗೆ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚಿನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
——————————-
SUMMARY |Power cut in M.G. Road, M.K. Road, Malepet, Banashankari Gudda, Primary Health Center, Sannikoppa, Masidi Keri, Indiranagar, Mangalya Mandir and surrounding areas under Hunchadakatte and Hadigallu Gram Panchayat limits.
KEY WORDS | Power cut in M.G. Road, M.K. Road, Malepet, Banashankari Gudda, Primary Health Center, Sannikoppa, Masidi Keri, Indiranagar, Mangalya Mandir , surrounding areas , Hunchadakatte and Hadigallu Gram Panchayat,