SHIVAMOGGA | MALENADUTODAY NEWS | ಮಲೆನಾಡು ಟುಡೆ Dec 13, 2024
ಜಲಮಂಡಳಿ ಶಿವಮೊಗ್ಗ ನಗರದಲ್ಲಿ ಎರಡು ದಿನಗಳ ಕಾಲ ನೀರು ಬರುವದಿಲ್ಲ ಎಂದು ಪ್ರಕಟಣೆಯೊಂದನ್ನ ಹೊರಡಿಸಿದೆ. ಪ್ರಕಟಣೆಯ ವಿವರ ಹೀಗಿದೆ.
ಶಿವಮೊಗ್ಗ ನಗರದಲ್ಲಿ 2 ದಿನ ಕುಡಿಯವ ನೀರಿನ ವ್ಯತ್ಯಯ
ಡಿಸೆಂಬರ್ 16 ಮತ್ತು 17 ರಂದು 2 ದಿನಗಳ ಕಾಲ ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರಿನ ವ್ಯತ್ಯಯವಾಗಲಿದೆ ಎಂದು ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯಲ್ಲಿರುವ ಕೃಷ್ಣರಾಜೇಂದ್ರ ಜಲ ಶುದ್ಧೀಕರಣ ಘಟಕಕ್ಕೆ ಎರಡು ದಿನ ವಿದ್ಯುತ್ ಪೂರೈಕೆ ನಿಲ್ಲಲಿದೆ. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯವಾಗಲಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
ಈ ಹಿನ್ನಲೆ ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸಬೇಕೆಂದು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತಕರು ತಿಳಿಸಿದ್ದಾರೆ.
SUMMARY | Drinking water supply stopped in Shivamogga city for two days
KEY WORDS | Drinking water supply stopped in Shivamogga city