SHIVAMOGGA | MALENADUTODAY NEWS | ಮಲೆನಾಡು ಟುಡೆ | Jan 2, 2025
ಶಿವಮೊಗ್ಗ | ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ನಡೆಸಲು ಕೋರಿ ಇಂದು ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರ ನೇತೃತ್ವದಲ್ಲಿ ಬೆಂಗಳೂರಿನ ರಾಜ್ಯ ಚುನಾವಣಾ ಆಯೋಗಕ್ಕೆ ಭೇಟಿ ನೀಡಿ, ಮಾನ್ಯ ಮುಖ್ಯ ಚುನಾವಣಾ ಆಯುಕ್ತರಿಗೆ ಮನವಿಯನ್ನು ಸಲ್ಲಿಸಲಾಯಿತು.
ಶಿವಮೊಗ್ಗ ಮಹಾನಗರ ಪಾಲಿಕೆಯ ಸದಸ್ಯರ ಅವಧಿಯು 2023 ನವಂಬರ್ ನಲ್ಲಿ ಮುಕ್ತಾಯಗೊಂಡಿದೆ. ಈ ಹಿನ್ನಲೆ ಒಂದು ವರ್ಷದಿಂದ ಚುನಾಯಿತ ಆಡಳಿತ ಮಂಡಳಿ ಇಲ್ಲದ ಕಾರಣ ಹಾಗೂ ಜನರ ಸಮಸ್ಯೆಗಳನ್ನು ಪಾಲಿಕೆಯಲ್ಲಿ ಆಲಿಸಿ ಪರಿಹಾರ ಕಂಡುಕೊಳ್ಳಲು ಹಾಗೂ ನಗರದ ಅಭಿವೃದ್ಧಿ ವಿಚಾರಗಳ ಬಗ್ಗೆ ತ್ವರಿತ ಕ್ರಮ ಕೈಗೊಳ್ಳುವ ಹಿತದೃಷ್ಟಿಯಿಂದ ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆ ನಡೆಸಲು ಕೋರಿ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಿಎಸ್ ಅರುಣ್, ಭಾರತಿ ಶೆಟ್ಟಿ ಹಾಗೂ ಡಾ. ಧನಂಜಯ್ ಸರ್ಜಿ ಶಿವಮೊಗ್ಗ ಮಹಾನಗರ ಪಾಲಿಕೆಯ ಮಾಜಿ ಸದಸ್ಯರುಗಳು ಹಾಗೂ ಶಿವಮೊಗ್ಗ ನಗರ ಮಂಡಲ ಬಿಜೆಪಿ ಮುಖಂಡರುಗಳು, ಕಾರ್ಯಕರ್ತರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
SUMMARY | Shivamogga City MLA S.N. Channabasappa visited the State Election Commission in Bengaluru today and submitted a memorandum to the Hon’ble Chief Election Commissioner seeking to hold the Shivamogga City Corporation elections
KEYWORDS | Shivamogga, MLA S.N. Channabasappa, State Election Commission,